ಎನ್.ಎಸ್. ಗೋಖಲೆ ಮುಂಡಾಜೆಗೆ ರಾಜ್ಯಮಟ್ಟದ ಉತ್ತಮ ಸಹಕಾರಿ ಪ್ರಶಸ್ತಿ

prashasthiಬೆಳ್ತಂಗಡಿ: ಸಹಕಾರ ರಂಗದಲ್ಲಿ ಸಲ್ಲಿಸುತ್ತಿರುವ ಸುದೀರ್ಘ ವರ್ಷದ ಸೇವೆ ಮತ್ತು ಕಾರ್ಯಸಾಧನೆಗಳನ್ನು ಪರಿಗಣಿಸಿ ಮುಂಡಾಜೆ ಸಹಕಾರಿ ಸಂಘದ ಅಧ್ಯಕ್ಷರೂ ಆಗಿರುವ ರಾಜ್ಯದ ಹಿರಿಯ ಸಹಾಕಾರಿಗಳಲ್ಲೊರ್ವರಾದ ಎನ್.ಎಸ್. ಗೋಖಲೆ ಅವರಿಗೆ ರಾಜ್ಯ ಮಟ್ಟದ ಉತ್ತಮ ಸಹಕಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ನ. 15 ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹದ ಬಹಿರಂಗ ಅಧಿವೇಶನದಲ್ಲಿ ಜಿಲ್ಲಾ ಉಸ್ತುವಾರಿ
ಸಚಿವ ರಮಾನಾಥ ರೈ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಿತ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಅವರನ್ನು ಪುರಸ್ಕರಿಸಲಾಯಿತು. ರಾಜ್ಯಮಟ್ಟದದಲ್ಲಿ ೮ ಮಂದಿಗೆ ಈ ಪ್ರಶಸ್ತಿ ಘೋಷಣೆಯಾಗಿದ್ದು ಈ ಪೈಕಿ ಬೆಳ್ತಂಗಡಿ ತಾಲೂಕಿನಿಂದ ಎನ್.ಎಸ್. ಗೋಖಲೆ ಅವರು ಎಕೈಕ ಸಹಕಾರಿಯಾಗಿ ಪ್ರಶಸ್ತಿ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.