HomePage_Banner_
HomePage_Banner_
HomePage_Banner_

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಿಂದ ದಾರಿ ದೀಪ ಕೊಡುಗೆ

hosangadi Gಹೊಸಂಗಡಿ: ಪೆರಿಂಜೆ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದ ಆಡಳಿದಾರರಾದ ಎ. ಜೀವಂಧರ ಕುಮಾರ್ ಅವರು ಹೊಸಂಗಡಿ ಗ್ರಾ.ಪಂ.ಗೆ ಒದಗಿಸಿದ ರೂ. 45 ಸಾವಿರ ಮೌಲ್ಯದ 10 ಸ್ಟ್ರೀಟ್ ಲೈಟನ್ನು ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ ಹೇಮಾವಸಂತ್ ಅವರಿಗೆ ನ.17 ರಂದು ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರರವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಗ್ರಾ.ಪಂ. ಅಧ್ಯಕ್ಷೆ ಹೇಮಾವಸಂತ್, ಗ್ರಾಮದ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಆಡಳಿತದಾರರು ಹಲವು ರೀತಿಯಲ್ಲಿ ಸಹಕಾರ ನೀಡುತ್ತಾ ಬಂದಿದ್ದಾರೆ. ಗ್ರಾಮ ಪಂಚಾಯತ್‌ಗೆ ಇವರ ಕೊಡುಗೆ ಅವಿಸ್ಮರಣೀಯ. ಇದೀಗ ನೀಡಲಾಗಿರುವ 10 ಸ್ಟ್ರೀಟ್‌ಲೈಟನ್ನು ಪಂಚಾಯತ್ ವ್ಯಾಪ್ತಿಯ ಹೆದ್ದಾರಿಗೆ ಅಳವಡಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದ ವಿಕಾಸ್ ಜೈನ್, ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ಲಲಿತಾ ಟಿ. ಹೆಗ್ಡೆ, ಇಸ್ಮಾಯಿಲ್ ಕೆ. ಪೆರಿಂಜೆ, ಖಾಲಿದ್ ಪುಲಾಬೆ, ಅನೂಪ್ ಜೆ. ಪಾಯಸ್, ಹೊಸಂಗಡಿ ಗ್ರಾ.ಪಂ. ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.