ದ.ಕ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್‌ಗೆ ಅತ್ಯುತ್ತಮ ಮಹಿಳಾ ಸಹಕಾರಿ ಬ್ಯಾಂಕ್ ಪ್ರಶಸ್ತಿ

mahila co operative bankge prasatiಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್‌ಗೆ 2016-17 ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಮಹಿಳಾ ಸಹಕಾರಿ ಬ್ಯಾಂಕ್ ಪ್ರಶಸ್ತಿ ದೊರೆತಿದೆ.
ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಸಮಾರಂಭದಲ್ಲಿ ರಾಜ್ಯದ ಸಹಕಾರಿ ಸಚಿವ ರಮೇಶ್ ಜಾರಕಿಹೊಳಿ ಹಾಗು ಅರಣ್ಯ ಸಚಿವ ಬಿ ರಮಾನಾಥ ರೈ ಇವರ ಉಪಸ್ಥಿಯಲ್ಲಿ ಮೀನುಗಾರಿಕಾ ಹಾಗು ಯುವಜನ ಸೇವೆ ಸಚಿವ ಪ್ರಮೋದ್ ಮದ್ವರಾಜ್ ಇವರು ಪ್ರಶಸ್ತಿ ವಿತರಿಸಿದರು. ಬ್ಯಾಂಕಿನ ಅಧ್ಯಕ್ಷರಾದ ಶ್ರೀಮತಿ ಸುಜೀತಾ ವಿ ಬಂಗೇರ ಮತ್ತು ಪ್ರಧಾನ ವ್ಯವಸ್ಥಾಪಕಾರದ ಶೀಮತಿ ಪ್ರತಿಭಾ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಬ್ಯಾಂಕಿನ ಸ್ಥಾಪಕ ಅಧ್ಯಕ್ಷೆ ಶ್ರೀಮತಿ ಸರಳಾ ಬಿ ಕಾಂಚನ್ ಉಪಸ್ಥಿರಿದ್ದರು. ವೇದಿಕೆಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಸಹಕಾರಿ ಸಂಘಗಳ ಉಪ ನಿಬಂಧಕ ಬಿಕೆ ಸಲೀಂ, ದ,ಕ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಅಚಾರ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.