ಕುಕ್ಕೇಡಿಯಲ್ಲಿ ಗುರುಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಉದ್ಘಾಟನೆ

ಕುಕ್ಕೆಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಮಿತಿ ಕುಂಡದಬೆಟ್ಟು -ಕುಕ್ಕೇಡಿ-ನಿಟ್ಟಡೆ, ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ, ಹಾಗೂ ಯುವವಾಹಿನಿ ಸಂಚಾಲನ ಸಮಿತಿ, ಕುಂಡದಬೆಟ್ಟು -ಕುಕ್ಕೇಡಿ-ನಿಟ್ಟಡೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿ. 10 ರಂದು ಡಾ| ಬಿ.ಆರ್. ಅಂಬೇಡ್ಕರ್ ಭವನ, ಕುಕ್ಕೇಡಿ-ಕುಂಡದಬೆಟ್ಟು ಇಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಗುರುಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ನಿಟ್ಟಡೆ ಗ್ರಾಮದ ಗೋಳಿಯಂಗಡಿ ಪಾಣೂರು ಬಳಿ ಕುಕ್ಕೇಡಿ ಗ್ರಾಮ ಪಂಚಾಯತು ವತಿಯಿಂದ ನಿರ್ಮಿಸಲ್ಪಟ್ಟ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಉದ್ಘಾಟನೆಯನ್ನು ಶಾಸಕ ಕೆ. ವಸಂತ ಬಂಗೇರ ನೆರವೇರಿಸಿದರು. ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ. ಸುಂದರ ಪೂಜಾರಿ ಅಮೇಯಿ ವಹಿಸಿದ್ದರು.
ಈ ಸಂದರ್ಭದಲ್ಲಿ ಮಂಗಳೂರು ಬ್ರಹ್ಮಶ್ರೀ ನಾರಾಯಣಗುರು ಅಧ್ಯಾಯನ ಪೀಠ ವಿಶ್ವವಿದ್ಯಾನಿಲಯದ ನಿರ್ದೇಶಕ ಮುದ್ದು ಮೂಡುಬೆಳ್ಳೆ, ಸರಕಾರಿ ಪ್ರೌಢ ಶಾಲೆ, ಕಲ್ಲಾಡಿ ಮಂಗಳೂರು ಮುಖ್ಯೋಪಾಧ್ಯಾಯಿನಿ ಸುರೇಖಾ ಕೆ.ಇ.ಎಸ್, ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ನಿಕಟಪೂರ್ವ ಅಧ್ಯಕ್ಷ ಭಗೀರಥ ಜಿ. ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಕುಮಾರ್ ಉಪ್ಪಾರು, ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ರಾಜಶ್ರೀ ರಮಣ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ತೇಜಾಕ್ಷಿ, ಕುಕ್ಕೇಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಎಚ್, ಬಿಲ್ಲವ ವೇದಿಕೆ ಅಧ್ಯಕ್ಷೆ ಲೀಲಾವತಿ ನಿಟ್ಟಡೆ ಯುವವಾಹಿನಿ ಅಧ್ಯಕ್ಷ ಎಚ್.ಎಲ್. ಉದಯ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.