ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಸುಳ್ಯ ತಾಲೂಕಿನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ 21 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಗ್ರಾಮ ಪಂಚಾಯತ್ ವ್ಯಾಪ್ತಿಯ 18 ರಿಂದ 45 ವರ್ಷ ವಯೋಮಿತಿಯ ಎಸ್.ಎಸ್.ಎಲ್.ಸಿ ಪಾಸಾದ ಅಂಗವಿಕಲರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅಮರ ಮುಡ್ನೂರು, ಬಾಳಿಲ, ಬಳ್ಪ, ಗುತ್ತಿಗಾರು, ಹರಿಹರ ಪಲ್ಲತ್ತಡ್ಕ, ಕಳಂಜ, ಕನಕಮಜಲು, ಕೊಲ್ಲಮೊಗ್ರ, ಮಡಪ್ಪಾಡಿ, ಮಂಡೆಕೋಲು, ಪಂಜ, ಉಬರಡ್ಕ ಮಿತ್ತೂರು, ಎಡಮಂಗಲ, ಎಣ್ಮೂರು, ಪೆರುವಾಜೆ, ಬೆಳ್ಳಾರೆ, ಐವರ್ನಾಡು, ಜಾಲ್ಸೂರು, ಸಂಪಾಜೆ, ಕೊಡಿಯಾಲ, ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೦7-೦1-2016 ಆಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು.
ಲಗತ್ತಿಸಬೇಕಾದ ದಾಖಲೆಗಳು: ವಿದ್ಯಾರ್ಹತೆ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ವಾರ್ಷಿಕ ಆದಾಯ ದೃಢೀಕರಣ, ಅಂಗವಿಕಲ ಗುರುತಿನ ಚೀಟಿ ಪ್ರತಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.