HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

೨೦೧೬-೧೭ನೇ ಸಾಲಿನ ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೊಳಪಡುವ ಆಶ್ರಮ ಶಾಲೆ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಖಾಲಿ ಇರುವ ಸ್ಥಾನಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆ.ಪೂ.ಬಾಲಕರ ವಿದ್ಯಾರ್ಥಿ ನಿಲಯ ಎನ್.ಎಂ.ಸಿ. ಹತ್ತಿರ ಸುಳ್ಯ, ಪ.ಜಾ. ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ತಾ.ಪಂ. ಆವರಣ ಸುಳ್ಯ, ಪ.ಜಾ. ಮೆ.ಪೂ. ಬಾಲಕಿಯರ ವಿದ್ಯಾರ್ಥಿ ನಿಲಯ ಅಜ್ಜಾವರ (ಕಾಂತಮಂಗಲ) ಸುಳ್ಯ, ಪ.ವರ್ಗದ ಮೆ.ಪೂ. ಬಾಲಕಿಯರ ವಿದ್ಯಾರ್ಥಿ ನಿಲಯ ಅಂಬಟೆಡ್ಕ ಸುಳ್ಯ, ಪ.ವರ್ಗದ ಮೆ.ಪೂ. ಬಾಲಕರ ವಿದ್ಯಾರ್ಥಿ ನಿಲಯ ಬಾಳಿಲ ಸುಳ್ಯ ಇಲ್ಲಿ ಪ್ರವೇಶಕ್ಕೆ ಅವಕಾಶವಿದೆ. ಪ.ಪಂ.ದ ಆಶ್ರಮ ಶಾಲೆಗಳಿಗೆ ಸುಳ್ಯ ತಾಲೂಕಿನ ಆಲೆಟ್ಟಿ, ಬಾಳಿಲ ಮತ್ತು ಸುಬ್ರಹ್ಮಣ್ಯದ ಆಶ್ರಮ ಶಾಲೆ ಇಲ್ಲಿ ಒಂದರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಮೆ.ಪೂ. ವಿದ್ಯಾರ್ಥಿ ನಿಲಯಗಳಲ್ಲಿ 5ರಿಂದ 1೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಆಸಕ್ತ ವಿದ್ಯಾರ್ಥಿಗಳು ಆಯಾ ವಿದ್ಯಾರ್ಥಿ ನಿಲಯ ಅಥವಾ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಾತಿ ಮತ್ತು ಆದಾಯ ದಾಖಲೆಯೊಂದಿಗೆ ಮೇ.3೦ರೊಳಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಸುಳ್ಯ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.