ಪ್ರಥಮ ದರ್ಜೆ ಸಹಾಯಕರ (FDA)ಹುದ್ದೆಗಳ ನೇಮಕಾತಿಯ ದಾಖಲಾತಿ ಪರಿಶೀಲನೆಗೆ ಆಯ್ಕೆ ಪಟ್ಟಿ ಪ್ರಕಟ

ರಾಜ್ಯ ಲೋಕಸೇವಾ ಆಯೋಗವು ಪ್ರಥಮ ದರ್ಜೆ ಸಹಾಯಕರ (FDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲಾತಿ ಪರಿಶೀಲನೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ದಾಖಲೆಗಳ ಪರಿಶೀಲನೆಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಆಯ್ಕೆಪಟ್ಟಿ ಇದಾಗಿದ್ದು, ಒಟ್ಟು 2484 ಹುದ್ದೆಗಳಿಗೆ ಕಳೆದ ಅಕ್ಟೋಬರ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಇದೀಗ ಒಂದು ಹುದ್ದೆಗೆ ಇಬ್ಬರು ಅಭ್ಯರ್ಥಿಗಳಂತೆ ಒಟ್ಟು 485೦ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಆಹ್ವಾನಿಸಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರಾಂತ್ಯದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. ದಾಖಲಾತಿ ಪರಿಶೀಲನೆಯ ದಿನಾಂಕಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮೂರು ವರ್ಷಗಳ ಪದವಿ ಅಂಕಪಟ್ಟಿಗಳು, ವಿವಿ ಪ್ರಮಾಣಪತ್ರ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿಯಾಗಿದ್ದರೆ ಅದಕ್ಕೆ ಪೂರಕ ದಾಖಲೆ, ಹೈದರಾಬಾದ್ ಕರ್ನಾಟಕ ಪ್ರಾಂತ್ಯಕ್ಕೆ ಮೀಸಲು ಲಬ್ಯವಿರುವ ದಾಖಲೆಗಳು, ಜಾತಿ ಪ್ರಮಾಣಪತ್ರ ದಾಖಲೆ, ಮಾಹಿತಿಗೆ ಮೂಲ ಅಧಿಸೂಚನೆಗಳೊಂದಿಗೆ ಪರಿಶೀಲನೆಯಲ್ಲಿ ಭಾಗವಹಿಸಬೇಕು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.