ರಾಷ್ಟ್ರ ಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆ ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯ ವಿದ್ಯಾರ್ಥಿಗೆ ಪ್ರಶಸ್ತಿ

m shahidಜೇಸಿಐ ಭಾರತ ಕಳೆದ ಆಗಸ್ಟ್ ತಿಂಗಳಲ್ಲಿ ರಾಷ್ಟ್ರಾದ್ಯಂತ ನಡೆಸಿದ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವಿದ್ಯಾರ್ಥಿ ಮಹಮ್ಮದ್ ಶಾಹಿದ್ ಬಿ.ಗೆ ಪ್ರಶಸ್ತಿ ಲಭಿಸಿದೆ. ರಾಷ್ಟ್ರ ಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ಜೇಸಿಐನ ವಲಯ 15ರಲ್ಲಿ ಮೂರು ಮಂದಿ ಟಾಪರ್‌ಗಳನ್ನು ಆಯ್ಕೆ ಮಾಡಲಾಗಿದ್ದು, ಉಡುಪಿಯಲ್ಲಿ ನಡೆದ ಜೇಸಿಐನ ವಲಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಯಿತು. ಬೆಳ್ಳಾರೆ ಜೇಸಿಐ ಘಟಕದ ವತಿಯಿಂದ ಈ ಪರೀಕ್ಷೆಯು ಬೆಳ್ಳಾರೆಯಲ್ಲಿ ನಡೆದಿತ್ತು. ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯು ೨ನೇ ಬಾರಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.