ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ

1 (2)ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಹಾಗೂ ದ.ಕ. ಹಾಗೂ ಉಡುಪಿ ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಜ್ಞಾನ ಗಂಗಾ ಹಾಗೂ ಜ್ಞಾನ ಸುಧಾ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಕುರಿತ ತಾಲೂಕು ಮಟ್ಟದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮವು ನ.೨ರಂದು ಸುಳ್ಯದ ಜ್ಯೋತಿ ಸರ್ಕಲ್ ಬಳಿ ಇರುವ ಅಮೃತಭವನದಲ್ಲಿ ನಡೆಯಿತು.

1 (1)
ಕಾರ್ಯಕ್ರಮವನ್ನು ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀಮತಿ ಎಂ.ಟಿ.ವೀಣ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಕೆಂಪಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಂತಿವನ ಟ್ರಸ್ಟ್‌ನ ನಿರ್ದೇಶಕ ಶಶಿಕಾಂತ್ ಜೈನ್ , ತಾ.ಪ್ರಾ.ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತೀರ್ಥರಾಮ, ಸಮೂಹ ಸಂಪನ್ಮೂಲ ವ್ಯಕ್ತಿ ಗೋಪಾಲ ಕೃಷ್ಣ ಬನ, ಶಿಕ್ಷಣ ಸಂಯೋಜಕ ಪದ್ಮನಾಭ ಅತ್ಯಾಡಿ, ಮಾ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಪಾ ಉಪಸ್ಥಿತರಿದ್ದರು. ತಾ.ಯೋಗ ಸಂಘಟಕಿ ಮಮತಾ ಎಂ.ಜೆ. ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿ ರೇಖಾ ಶೇಟ್ ವಂದಿಸಿದರು. ಕೋಲ್ಚಾರು ಶಾಲಾ ಶಿಕ್ಷಕಿ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಸಭಾಕಾರ್ಯಕ್ರಮದ ಬಳಿಕ ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, “ಬದುಕಿಗೆ ಬೆಳಕು” ಪದ್ಯಗಳ ಕಂಠಪಾಠ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಗಳು ನಡೆದವು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.