ಗಾಂಧಿನಗರ ಕಾಲೇಜಿನಲ್ಲಿ ಚಿತ್ರಕಲಾ ಪ್ರದರ್ಶನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಹಾಗೂ ವಿದ್ಯಾರ್ಥಿಗಳ ಸಾಂಪ್ರದಾಯಿಕ ಚಿತ್ರಕಲಾ ಪ್ರದರ್ಶನ ಗಾಂಧಿನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

Gangdhinagra

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸುವಿಚಾರ ಸಾಹಿತ್ಯ ವೇದಿಕೆಗಳ ಆಶ್ರಯದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಕಾಡೆಮಿ ಸದಸ್ಯ ಮೋಹನ್ ಸೋನಾ ಉದ್ಘಾಟಿಸಿದರು.  ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ಅಧ್ಯಕ್ಷ ಡಾ.ಹರಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಮದುವೆಗದ್ದೆ ಬೋಜಪ್ಪ ಗೌಡ, ಕಾಲೇಜಿನ ಪ್ರಾಂಶುಪಾಲ ಮಹಾಲಿಂಗ ಭಟ್, ಎಣ್ಮೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಯು.ಕೆ.ಶೀತಲ್, ತಾಲೂಕು ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಎಣ್ಮೂರು, ಗಾಂಧಿನಗರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ನಳಿನಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕೋಟ್ಯಪ್ಪ ಪೂಜಾರಿ, ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕನ್ನಡ ಸಾಹಿತ್ಯ ಪರಿಷತ್ ಕೋಶಾಧಿಕಾರಿ ದಯಾನಂದ ಆಳ್ವ ವೇದಿಕೆಯಲ್ಲಿದ್ದರು.

ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಸದಸ್ಯರಾದ ಎಂ.ವಿ.ಗಿರಿಜಾ, ಮಹಾಲಕ್ಷ್ಮಿ ಕೊರಂಬಡ್ಕ ಉಪಸ್ಥಿತರಿದ್ದರು. ಚಿನ್ನಪ್ಪ ಗೌಡ ಪತ್ತುಕುಂಜ ಸ್ವಾಗತಿಸಿ, ಅರುಣ್ ಕುಮಾರ್ ಪಡ್ಡಂಬೈಲು ವಂದಿಸಿದರು. ಸುಳ್ಯ ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿನಿ ವಿಮರ್ಶಾ ಕೊಚ್ಚಿ ಹಾಗೂ ಎಣ್ಮೂರು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಂಪ್ರದಾಯಿಕ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.