ಕನ್ನಡ ಭಾವಗಾನ – ಸಂಭ್ರಮ ಕಾರ್ಯಕ್ರಮ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸುವಿಚಾರ ಸಾಹಿತ್ಯ ವೇದಿಕೆಗಳ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಕನ್ನಡ ಭಾವಗಾನ ಸಂಭ್ರಮ ಕಾರ್ಯಕ್ರಮ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಿತು.

Kannada

ಸೈಂಟ್ ಬ್ರಿಜಿಡ್ಸ್ ಚರ್ಚಿನ ಧರ್ಮಗುರು ಫಾದರ್ ವಿನ್ಸೆಂಟ್ ಡಿ ಸೋಜ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ಅಧ್ಯಕ್ಷ ಡಾ.ಹರಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್ ಸದಸ್ಯೆ ಸುನಿತಾ ಮೊಂತೆರೊ, ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮ, ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷ ಅರುಳಪ್ಪನ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಎಂ.ಮೀನಾಕ್ಷಿ ಗೌಡ ವೇದಿಕೆಯಲ್ಲಿದ್ದರು.
ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೃಷ್ಣರಾಜ್ ಮತ್ತು ಬಳಗದವರಿಂದ ಭಾವಗಾನ ಕಾರ್ಯಕ್ರಮ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ, ಸದಸ್ಯರಾದ ಎಂ.ವಿ.ಗಿರಿಜಾ, ಮಹಾಲಕ್ಷ್ಮಿ ಕೊರಂಬಡ್ಕ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.