ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ಕಛೇರಿಗೆ ಶಂಕುಸ್ಥಾಪನೆ

Advt_NewsUnder_1
Advt_NewsUnder_1

subramanya kulkunda kamgari shanku stapane copyಸುಬ್ರಹ್ಮಣ್ಯದ ಕುಲ್ಕುಂದದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ವಲಯ ಅರಣ್ಯಾಧಿಕಾರಿ ಕಛೇರಿಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ನ.8 ರಂದು ಗುದ್ದಲಿ ಪೂಜೆ ನೆರವೇರಿಸಿದರು.
ಈಗಾಗಲೇ ಸುಬ್ರಹ್ಮಣ್ಯದ ಸವಾರಿ ಮಂಟಪದ ಬಳಿ ಕಾರ್ಯನಿರ್ವಹಿಸುತ್ತಿರುವ ಕಛೇರಿಯು ಕುಲ್ಕುಂದಕ್ಕೆ ಸ್ಥಳಾಂತರಗೊಳ್ಳಲಿದೆ. ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಈ ನೂತನ ಕಛೇರಿಯು ನಿರ್ಮಾಣವಾಗಲಿದೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ದೇವರಾಜ್ ಕೆ.ಎಸ್, ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯೆ ವಿಮಲಾರಂಗಯ್ಯ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿನೇಶ್ ಬಿ.ಎನ್, ವಲಯ ಅರಣ್ಯಾಧಿಕಾರಿ ಮಂಜುನಾಥ್, ರವೀಂದ್ರ ರುದ್ರಪಾದ, ಸತೀಶ್ ಕೂಜುಗೋಡು ಹಾಗೂ ಅರಣ್ಯ ಸಿಬ್ಬಂದಿಗಳು ಮತ್ತು ಊರವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.