ನ.19ರಂದು ಇಂದಿರಾಗಾಂಧಿ ಜನ್ಮಶತಮಾನೋತ್ಸವ – ಜಿಲ್ಲಾ ಕಾಂಗ್ರೆಸ್‌ನಿಂದ ಮಂಗಳೂರಿನಲ್ಲಿ ಬೃಹತ್ ಸಮಾವೇಶ

ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ನವಂಬರ್ 19 ರಂದು ಮಧ್ಯಾಹ್ನ 2 ಗಂಟೆಗೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿದೆ.

Mvg press

ಪತ್ರಿಕಗೋಷ್ಠಿಯಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈ ಕುರಿತು ವಿವರ ನೀಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಂದ ೧ ಲಕ್ಷ ಮಂದಿ ಪಕ್ಷದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದು, ಸುಳ್ಯದಿಂದ ೨ ಸಾವಿರ ಮಂದಿ ಭಾಗವಹಿಸಲಿದ್ದಾರೆ. ಅವರಿಗೆ ಪಕ್ಷದ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದವರು ಹೇಳಿದರು.
ಇಂದಿರಾಗಾಂಧಿ ಜನ್ಮ ಶತಮಾನೋತ್ಸವವನ್ನು ವರ್ಷವಿಡೀ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದ್ದು, ೧೯ರಂದು ಮಂಗಳೂರಿನಲ್ಲಿ ಉದ್ಘಾಟನೆ ನಡೆಯಲಿದೆ. ಉಳಿದಂತೆ ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇಂದಿರಾಗಾಂಧಿಯವರು ಈ ದೇಶಕ್ಕೆ ಹೇಗೆ ಅನಿವಾರ್ಯವಾಗಿದ್ದರು ಎಂಬುದನ್ನು ಪ್ರಚುರಪಡಿಸುವುದರೊಂದಿಗೆ ಕಾಂಗ್ರೆಸ್‌ನ ಕೆಲಸವನ್ನು ಜನಮಾನಸದಲ್ಲಿ ಉಳಿಸುವ ದೃಷ್ಠಿಯಿಂದ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಆರ್ಥಿಕ ಸರ್ಜಿಕಲ್ ದಾಳಿ ಎಂಬ ಮೋದಿ ಹೇಳಿಕೆ ಕೇವಲ ಗಿಮಿಕ್ ಎಂದು ತಾವು ನೋಟು ರದ್ದು ಮಾಡಿದ ಮಾರನೇ ದಿನವೇ ಹೇಳಿಕೆ ನೀಡಿದ್ದು, ಈಗ ನಡೆಯುತ್ತಿರುವ ವಿದ್ಯಾಮಾನಗಳನ್ನು ನೋಡಿದಾಗ ಸಾಮಾನ್ಯ ಜನರಿಗೆ ಅದು ಅರಿವಾಗುತ್ತಿದೆ. ರಾಹುಲ್ ಗಾಂಧಿಯವರು ಸರತಿ ಸಾಲಿನಲ್ಲಿ ನಿಂತು ಬ್ಯಾಂಕಿನಿಂದ ಹಣ ಪಡೆದಿರುವುದಕ್ಕೆ ಪ್ರಧಾನಿ ಮೋದಿ ಟೀಕಿಸಿದ್ದು ಜನ ಸಾಮಾನ್ಯರಿಗೆ ಮಾಡಿದ ಅವಮಾನ ಎಂದು ವೆಂಕಪ್ಪ ಗೌಡ, ಮೋದಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪಕ್ಷದ ಮುಖಂಡರಾದ ಕೆ.ಎಂ.ಮುಸ್ತಫ, ನಂದರಾಜ್ ಸಂಕೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.