ಸುಳ್ಯ : ರೋಟರಿ ವಿದ್ಯಾ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

Advt_NewsUnder_1
Advt_NewsUnder_1
Advt_NewsUnder_1

r1ಸುಳ್ಯದ ರೋಟರಿ ವಿದ್ಯಾ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಮಿತ್ತಡ್ಕದ ರೋಟರಿ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.

ರೋಟರಿ ಕ್ಲಬ್ ಅಧ್ಯಕ್ಷ ಗಿರಿಜಾಶಂಕರ ತುದಿಯಡ್ಕ ಕ್ರೀಡಾಜ್ಯೋತಿ ಬೆಳಗುವುದರ ಮೂಲಕ ಕ್ರೀಡಾಕೂಟ ಉದ್ಘಾಟಿಸಿದರು. ಶಾಲಾ ಸಂಚಾಲಕ ಎಚ್.ಎಸ್.ವೈಲಾಯ ಅಧ್ಯಕ್ಷತೆ ವಹಿಸಿದ್ದರು. ಎಡಪದವು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಕ್ರೀಡಾ ನಿರ್ದೇಶಕ ಕಾವು ಪ್ರೇಮನಾಥ ಅತಿಥಿಯಾಗಿದ್ದರು. ರೋಟರಿ ಚಾರಿಟೇಬಲ್ ಟ್ರಸ್ಟ್‌ನ ಸೀತಾರಾಮ ರೈ ಸವಣೂರು, ಎಸ್.ಎಂ.ಬಾಪೂ ಸಾಹೇಬ್, ದಳ ಸುಬ್ರಾಯ ಭಟ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷರುಗಳಾದ ಗಣೇಶ್ ಶರ್ಮ, ಲಿಂಗಪ್ಪ ಗೌಡ, ರೋಟರಿ ಸದಸ್ಯರಾದ ಎನ್.ಎ.ಜೀತೇಂದ್ರ, ಎ.ಎಂ.ಭಟ್, ಪ್ರಭಾಕರ ನಾಯರ್, ಶಿಕ್ಷಕ ರಕ್ಷಕ ಸಂಘದ ಸದಸ್ಯ ಸೋಮನಾಥ ಕೇರ್ಪಳ, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲೆ ಶೋಭಾ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ವೇದಿಕೆಯಲ್ಲಿದ್ದರು. ರೋಟರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು ಸ್ವಾಗತಿಸಿ, ಶಿಕ್ಷಕಿ ನಳಿನಿ ವಂದಿಸಿದರು. ಎಂ.ಆರ್.ಶ್ರಾವ್ಯ, ಎನ್.ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.