ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ

ಸುಳ್ಯದ ರೋಟರಿ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ ಮಿತ್ತಡ್ಕದ ಶಾಲಾ ಆವರಣದಲ್ಲಿ ನಡೆಯಿತು.

r1

ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ, ರಾಮಕುಂಜದ ರಾಮಕುಂಜೇಶ್ವರ ಸಂಸ್ಕ್ರತ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಟಿ.ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳಿಗೆ ನೀಡುವ ಶಿಕ್ಷಣವೇ ಸಂಪತ್ತು. ಶಿಕ್ಷಣ ಸಂಸ್ಥೆಗಳೂ ಊರಿನ ಸಂಪತ್ತು ಎಂದು ಅವರು ಹೇಳಿದರು.r

ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಗಿರಿಜಾಶಂಕರ ತುದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ ಕುಂಚಡ್ಕ ಅತಿಥಿಗಳಾಗಿದ್ದರು. ಶಾಲಾ ಸಂಚಾಲಕ ಎಚ್.ಎಸ್.ವೈಲಾಯ, ರೋಟರಿ ಚಾರಿಟೇಬಲ್ ಟ್ರಸ್ಟ್‌ನ ಎಸ್.ಎಂ.ಬಾಪೂ ಸಾಹೇಬ್, ರಾಮಚಂದ್ರ, ಸವಣೂರು ಸೀತಾರಾಮ ರೈ, ದಳ ಸುಬ್ರಾಯ ಭಟ್, ಜೆ.ಕೆ.ರೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಕೆ.ವಿ.ಜಯಲಕ್ಷ್ಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು, ವಿದ್ಯಾರ್ಥಿ ಮುಖಂಡ ಎನ್.ಸಾಗರ್, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ  ವಿದ್ಯಾರ್ಥಿ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಉಬರಡ್ಕದ ಸುನಿಲ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.