HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಗಾಂಧಿನಗರ ಶಾಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಭಾವೈಕ್ಯತಾ ಶಿಬಿರ ಮತ್ತು ಮಕ್ಕಳ ಮೇಳ

gಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಸೇವಾದಳ ತಾಲೂಕು ಸಮಿತಿ ಸುಳ್ಯ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಭಾವೈಕ್ಯತಾ ಶಿಬಿರ ಮತ್ತು ಮಕ್ಕಳ ಮೇಳ ಡಿ.೮ರಂದು ಗಾಂಧಿನಗರ ಮಾ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಸುಳ್ಯ ತಾಲೂಕು ಭಾರತ ಸೇವಾದಳದ ಅಧ್ಯಕ್ಷ ಹೊನ್ನಪ್ಪ ಗೌಡ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಭಾರತ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೆ.ಗೋಕುಲ್ ದಾಸ್, ಗಾಂಧಿನಗರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಡಾ| ಮಹಾಲಿಂಗ ಭಟ್ ಬಿ.ಎಸ್., ಸುಳ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ತೀರ್ಥರಾಮ ಅಡ್ಕಬಳೆ, ಅಲ್ಪಸಂಖ್ಯಾತರ ವಿವಿಧೊದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಆರ್. ಕೆ. ಮಹಮ್ಮದ್, ಜೈ ಭಾರತ್ ಯುವಕ ಮಂಡಲದ ಅಧ್ಯಕ್ಷ ಕೆ.ಬಿ. ಅಬ್ದುಲ್ ಮಜೀದ್, ಭಾಗವಹಿಸಿದ್ದರು. ಭಾರತ ಸೇವಾದಳದ ತಾಲೂಕು ಸಂಘಟಕ ಟೈಟಸ್ ವರ್ಗಿಸ್, ಗಾಂಧಿನಗರ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಅಝೀಝ್, ಗಾಂಧಿನಗರ ಶಾಲಾ ಮುಖ್ಯ ಶಿಕ್ಷಕ ಸೇರ ಕೋಟಿಯಪ್ಪ ಪೂಜಾರಿ, ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ ಸ್ವಾಗತಿಸಿ, ಪದ್ಮನಾಭ ಅತ್ಯಾಡಿ ವಂದಿಸಿದರು.

ಸಭಾಕಾರ್ಯಕ್ರಮದ ನಂತರ ನಡೆದ ಪುರ ಮೆರವಣಿಗೆಗೆ ನ.ಪಂ.ಸದಸ್ಯ ಎನ್.ಎ. ರಾಮಚಂದ್ರ ಚಾಲನೆ ನೀಡಿದರು. ರ್‍ಯಾಲಿಯು ಸುಳ್ಯ ಖಾಸಗಿ ಬಸ್ ನಿಲ್ದಾಣದವರೆಗೆ ಬಂದು ಗಾಂಧಿನಗರ ಶಾಲೆಗೆ ಹಿಂತುರುಗಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.