ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

Advt_NewsUnder_1
Advt_NewsUnder_1

sports 1 copyಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ 2016-17ನೇ ಸಾಲಿನ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಬೆಳ್ಳಾರೆ ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು.

sports 2 copy
ಸುಳ್ಯದ ಜ್ಞಾನದೀಪ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಯ ಮಾನಸಿಕ, ದೈಹಿಕ ವಿಕಾಸಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದರು. ಜ್ಞಾನದೀಪ ಸಂಸ್ಥೆಯ ಗೌರವ ಸಲಹೆಗಾರ ಗಫೂರ್ ಸಾಹೇಬ್ ಪಾಲ್ತಾಡ್ ಮಾತನಾಡಿ, ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯಲ್ಲೂ ಈ ರೀತಿಯ ಶಿಸ್ತುಬದ್ಧ ಕ್ರೀಡಾಕೂಟ ನಡೆಸಿ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿರುವುದು ಶ್ಲಾಘನೀಯ ಕಾರ್ಯ ಎಂದರು. ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಜನಾರ್ಧನ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕ ಕೊರಗಪ್ಪ ಕುರುಂಬುಡೇಲು ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾಗತಿಸಿ ಪ್ರಸ್ತಾವಿಸಿದರು. ಉಪನ್ಯಾಸಕ ತೀರ್ಥಾನಂದ ಕಲ್ಮಡ್ಕ ವಂದಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕರುಗಳಾದ ಪ್ರಸಾದ್ ನಾರ್ಣಕಜೆ, ಮಹಮ್ಮದ್, ಉಪನ್ಯಾಸಕಿಯರುಗಳಾದ ಸರಸ್ವತಿ,ಸೌಮ್ಯಾ,ವಿಶಾಲಾಕ್ಷಿ,ನಿವ್ಯಾ ಕೆ.ಆರ್ ಸಹಕರಿಸಿದರು. ಸಮಾರಂಭಕ್ಕೂ ಮೊದಲು ಸಂಸ್ಥೆಯ ಬೆಳ್ಳಾರೆ ಮತ್ತು ಸುಳ್ಯದ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.