ಸುಳ್ಯ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಸಭೆ

congres st morcha copy

ಸುಳ್ಯ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಸಭೆ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯೆನ್ ಜಯಪ್ರಕಾಶ್ ರೈ ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಎಸ್ ಸಿ ಘಟಕವನ್ನು ಬಲಿಷ್ಠ ಗೊಳಿಸುವ ಬಗ್ಗೆ ಚರ್ಚಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಅಚ್ಚುತ ಮಲ್ಕಜೆ, ಕೆ.ಪಿ.ಸಿ.ಸಿ. ಸದಸ್ಯ ಡಾ ರಘು, ಜಿಲ್ಲಾ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಶೇಖರ್ ಕುಕ್ಕೆಡಿ, ಮಾಜಿ ಶಾಸಕ ಕೆ ಕುಶಲ, ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ ಸಂಕೇಶ, ಎಸ್.ಸಿ ಘಟಕದ ಪ್ರಧಾನ ಕಾರ್ಯದರ್ಶಿ ನಾರಾಯಣ ಜಟ್ಟಿಪಳ್ಳ, ನಗರ ಪಂಚಾಯತ್ ಸದಸ್ಯ ಶಿವಕುಮಾರ ಕಂದಡ್ಕ ಉಪಸ್ಥಿತರಿದ್ದರು. ಅಲ್ಲದೆ ಪಕ್ಷದ ನಾಯಕರು, ಎಸ್.ಸಿ. ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.