ಪಂಜ: ಸಹಕಾರ ಸಪ್ತಾಹ ಮತ್ತು ಉತ್ಕರ್ಷ ಸಹಕಾರ ಸೌಧ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

panja c a bank
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಣಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಸಹಕಾರ ಇಲಾಖೆ,ಸುಳ್ಯ ತಾಲೂಕು ಸಹಕಾರಿ ಯೂನಿಯನ್, ಸುಳ್ಯ ತಾಲೂಕು ಎಲ್ಲಾ ಸಹಕಾರ ಸಂಘಗಳ ಮತ್ತು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ನ.೧೯.ರಂದು ನಡೆಯಲಿರುವ ೬೪ನೇ ಅಖಿಲ ಭಾರತ ಸಹಕಾರ ಸಪ್ತಾಹ ಮತ್ತು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉತ್ಕರ್ಷ ಸಹಕಾರ ಸೌಧ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ.೨೪ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆಯಿತು. ಇದೇ ವೇಳೆ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆ ಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಉಪಾಧ್ಯಕ್ಷ ಲೋಕೇಶ್ ಬರೆಮೇಲು, ನಿರ್ದೇಶಕರಾದ ಶ್ರೀಕೃಷ್ಣ ಭಟ್ ಪಟೋಳಿ, ವಾಸುದೇವ ಪಳಂಗಾಯ, ಭಾಸ್ಕರ ಗೌಡ ಚಿದ್ಗಲ್ಲು, ವಾಚಣ್ಣ ಕೆರೆಮೂಲೆ, ರಘುನಾಥ ರೈ ಕೆರೆಕ್ಕೋಡಿ, ಗಣೇಶ್ ಪೈ, ರೇಖಾ ರೈ, ಮೋಹಿನಿ ಬೊಳ್ಮಲೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.