ಪೆರಿಂಜೆ: ಶ್ರೀ ಧ.ಮಂ. ಅನುದಾನಿತ ಶಾಲಾ ರಜತ ಮಹೋತ್ಸವ

perinje SDM copy perinjeವೇಣೂರು: ಶಿಕ್ಷಣಮಟ್ಟವನ್ನು ಮತ್ತಷ್ಟು ಸುಧಾರಿಸಿಕೊಂಡು ಪಠ್ಯೇತರ ಚಟುವಟಿಕೆಗಳಿಗೆ ಕನ್ನಡ ಮಾಧ್ಯಮ ಶಾಲೆಗಳು ಪ್ರೋತ್ಸಾಹ ನೀಡಬೇಕು. ಅನುಕೂಲತೆ, ವ್ಯವಸ್ಥೆ ಹಾಗೂ ಪ್ರೇರಣೆ ದೊರೆತಾಗ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಮತ್ತಷ್ಟು ಸಾಧನೆಗೈಯ್ಯಲು ಸಾಧ್ಯ ಎಂದು ಶ್ರೀ. ಧ.ಮಂ. ಎಜ್ಯುಕೇಶನಲ್ ಸೊಸಾಟಿಯ ಅಧ್ಯಕ್ಷ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಶನಿವಾರ ಪೆರಿಂಜೆ ಶ್ರೀ. ಧ.ಮಂ. ಅನುದಾನಿತ ಪ್ರೌಢ ಶಾಲೆಯ ರಜತ ಮಹೋತ್ಸವ ಸಮಾರಂಭದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದ.ಕ.ಜಿ.ಪಂ. ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಮಾತನಾಡಿ, ಡಾ| ಹೆಗ್ಗಡೆಯವರ ಶ್ರದ್ಧೆ ಹಾಗೂ ಶ್ರಮದಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ಹೆಮ್ಮರವಾಗಿ ಬೆಳೆದಿದೆ ಎಂದರು.
‘ರಜತ ಪ್ರಭಾ ಬಿಡುಗಡೆ: ಶಾಲಾ ಬೆಳಿಹಬ್ಬದ ನೆನಪಿನ ಸಂಚಿಕೆ ‘ರಜತ ಪ್ರಭಾವನ್ನು ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್ ಹಾಗೂ ವಾರ್ಷಿಕ ಸಂಚಿಕೆಯನ್ನು ಡಾ| ಬಿ. ಯಶೋವರ್ಮ ಬಿಡುಗಡೆಗೊಳಿಸಿದರು.
ವಿಧಾನಪರಿಷತ್ ಮುಖ್ಯ ಸಚೇತಕ ಕ್ಯಾ| ಗಣೇಶ್ ಕಾರ್ಣಿಕ್ ಧ್ವಜಾರೋಹಣ ನೆರವೇರಿಸಿದರು. ರಜತ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ ಹೇಮಾವಸಂತ್, ಬೆಳ್ತಂಗಡಿ ಕ್ಷೇತ್ರ ಪ್ರಭಾರ ಶಿಕ್ಷಣಾಧಿಕಾರಿ ತಾರಾಕೇಸರಿ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಆನಂದ ಕುಲಾಲ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಯು.ಎಸ್., ಶಾಲಾ ನಾಯಕ ಕಾರ್ತಿಕ್ ಕುಲಾಲ್ ವೇದಿಕೆಯನ್ನು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.