HomePage_Banner_
HomePage_Banner_
HomePage_Banner_

ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಐದು ಜಿಲ್ಲೆಗಳನ್ನೊಳಗೊಂಡ ಕರಾವಳಿ ಜಿಲ್ಲಾ ಸಂಯೋಜಕರಾಗಿ ಯು.ಕೆ ಅಬ್ದುಲ್ ಶುಕೂರ್ ಉಜಿರೆ ನೇಮಕ

Advt_NewsUnder_1

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC) ಇದರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಈ ಐದು ಜಿಲ್ಲೆಗಳನ್ನೊಳಗೊಂಡ ಕರಾವಳಿ ವಲಯದ ಅಲ್ಪಸಂಖ್ಯಾತರ ವಿಭಾಗದ ಸಂಯೋಜಕರಾಗಿ ಯು.ಕೆ ಅಬ್ದುಲ್ ಶುಕೂರ್ ಉಜಿರೆ ಇವರನ್ನು ನೇಮಕಗೊಳಿಸಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಕರಾವಳಿ ವಲಯ ಸಮಿತಿ ಚೆಯರ್‌ಮೆನ್ ಯು.ಬಿ ಅಬ್ದುಲ್ ಸಲೀಂ ಅವರು ಆದೇಶ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ಶಾಸಕ ಕೆ ವಸಂತ ಬಂಗೇರ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ರಾಜಶೇಖರ ಅಜ್ರಿ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ.
ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿರುವ ಯು.ಕೆ ಅಬ್ದುಲ್ ಶುಕೂರ್ ಅವರು ಈ ಹಿಂದೆ ಪಕ್ಷದ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕಳೆದ ವಿಧಾನ ಸಭಾ ಚುನಾವಣೆ ಮತ್ತು ಜಿ.ಪಂ- ತಾ.ಪಂ ಚುನಾವಣೆಯ ಸಂದರ್ಭ ಪಕ್ಷ ಸಂಘಟನೆ ಮತ್ತು ಚುನಾವಣಾ ಪ್ರಚಾರದಲ್ಲಿ ತನ್ನನ್ನು ತಾನು ಪೂರ್ಣವಾಗಿ ತೊಡಗಿಸಿಕೊಂಡಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.