ಪೆನ್ಸಿಲ್ವೇನಿಯಾ ವಿ.ವಿ.ಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Advt_NewsUnder_1
Advt_NewsUnder_1

ಧರ್ಮಸ್ಥಳ : ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ 8 ವಿದ್ಯಾರ್ಥಿಗಳನ್ನೊಳಗೊಂಡ ತಂಡವು 2 ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಾರ್ಯಕ್ರಮಗಳ ವಿಶೇಷ ಅಧ್ಯಯನಕ್ಕಾಗಿ ಆಗಮಿಸಿದ್ದು ಯೋಜನೆಯ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿತು. ಯೋಜನೆಯ ಕೇಂದ್ರ ಕಛೇರಿಗೆ ಭೇಟಿ ನೀಡಿದ ತಂಡಕ್ಕೆ ಡಾ. ಎಲ್.ಹೆಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಮಮತಾ ಹರೀಶ್ ರಾವ್ ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕೇಂದ್ರ ಕಛೇರಿ ಹಾಗೂ ಉತ್ಪಾದನಾ ಘಟಕ ಹಾಗೂ ಮಾರಾಟ ಮಳಿಗೆಗೆ ಈ ತಂಡ ಭೇಟಿ ನೀಡಿತು. ಉಡುಪಿ ಜಿಲ್ಲೆಯಲ್ಲಿ ಯೋಜನೆ ಪ್ರಾಯೋಜಿತ ಪ್ರಗತಿಬಂಧು, ಸ್ವಸಹಾಯ, ಜ್ಞಾನವಿಕಾಸ ಕೇಂದ್ರ, ತಂಡವು ಭೇಟಿ ನೀಡಿ ಅಧ್ಯಯನ ನಡೆಸಿ ಸಿರಿ ನಿರ್ದೇಶಕಿ ಮನೋರಮಾ ಭಟ್, ಶ್ರೀಮತಿ ಜಯಂತಿ, ಯೋಜನಾಧಿಕಾರಿ, ವಸಂತ ನಾಯಕ್, ಯೋಜನಾಧಿಕಾರಿಯವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.