HomePage_Banner_

ಶ್ರೀ ಗುರುದೇವ ಕಾಲೇಜಿನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ : ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ ಕಾಲೇಜು ಬೆಳ್ತಂಗಡಿ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ನೂತನ ಕಟ್ಟಡದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 7 ರಂದು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ ವಸಂತ ಬಂಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಚಿವರಾದ ರಮಾನಾಥ ರೈ ಮತ್ತು ಯು.ಟಿ ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಉಪಸ್ಥಿತರಿದ್ದರು. ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್‌ನ ಉಪಾಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಕಾರ್ಯ ದರ್ಶಿ ಭಗೀರಥ ಜಿ, ಕೋಶಾಧಿಕಾರಿ ಗಂಗಾಧರ ಮಿತ್ತಮಾರು, ಟ್ರಸ್ಟಿಗಳಾದ ಪೀತಾಂಬರ ಹೇರಾಜೆ, ಸುಜೀತಾ ವಿ ಬಂಗೇರ, ಧರ್ಮ ವಿಜೇತ್, ಪ್ರತಿತಾ ವಿಜೇತ್, ಕಾಲೇಜಿನ ಪ್ರಾಂಶುಪಾಲ ಎ ಕೃಷ್ಣಪ್ಪ ಪೂಜಾರಿ, ಮತ್ತು ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿಗಳು, ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.

Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.