HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಜ.12 : ಯುವಭಾರತ ನವಭಾರತ

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗ ಡಿ ಮಂಡಲ ವತಿ ಯಿಂದ ಸ್ವಾಮಿ ವಿವೇಕಾನಂದರ 155ನೇ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಯುವದಿನ ಅಂಗವಾಗಿ ಜ. 12ರಂದು ಯುವಭಾರತ ನವಭಾರತ ಕಾರ್ಯಕ್ರಮವು ಬೆಳ್ತಂಗಡಿ ಸುವರ್ಣ ಆರ್ಕೇಡ್‌ನ ಸಪ್ತಪದಿ ಸಭಾಂಗಣದಲ್ಲಿ ನಡೆಯಲಿದೆ.
ಬಿಜೆಪಿ ಮಂಗಳೂರು ವಿಭಾಗದ ಸಹಪ್ರಭಾರಿ ಪ್ರತಾಪ್‌ಸಿಂಹ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಿಜೆಪಿ ಮುಖಂಡ, ವಾಗ್ಮಿ ಹರಿಕೃಷ್ಣ ಬಂಟ್ವಾಳ ಪ್ರಧಾನ ಭಾಷಣ ಮಾಡಲಿದ್ದಾರೆ. ಮಾಜಿ ಶಾಸಕ ಪ್ರಭಾಕರ ಬಂಗೇರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ದ.ಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಯಾ| ಬ್ರಿಜೇಶ್ ಚೌಟ, ಬಿಜೆಪಿ ಮಂಡಲ ಅಧ್ಯಕ್ಷ ರಂಜನ್ ಜಿ. ಗೌಡ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜ, ಸವಣಾಲು ಶ್ರೀ ರಾಮಕೃಷ್ಣ ಸೇವಾ ಸಮಿತಿ ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿಲಿದ್ದಾರೆ.
ತಾಲೂಕಿನ 50 ಯುವ ಸಂಘಟನೆಗಳಿಗೆ ಯುವ ಸಾಧನಾ ಭೂಷಣ ಪುರಸ್ಕಾರ ನಡೆಯಲಿದ್ದು, ಶಿರ್ಲಾಲಿನ ಅನಾರೋಗ್ಯ ಪೀಡಿತ ಅಶಕ್ತ ಕುಟುಂಬಕ್ಕೆ ಸಹಾಯಧನ ವಿತರಣೆ ಮತ್ತು ಸ್ವರ್ಗೀಯ ದೀಪಕ್ ರಾವ್ ಕುಟುಂಬಕ್ಕೆ ನೆರವಿನ ಹಸ್ತ ನೀಡಲಿದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂಪತ್ ಬಿ. ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾರಂಭದಲ್ಲಿ ಅಮೇರಿಕಾದ ಚಿಕಾಗೋ ವಿಶ್ವ ಸಮ್ಮೇಳನದಲ್ಲಿ ನುಡಿದ ಸ್ವಾಮಿ ವಿವೇಕಾನಂದರ ಶ್ರೇಷ್ಠ ವಿಚಾರಧಾರೆಗಳ ವೀಡಿಯೋ ಪ್ರದರ್ಶನ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *