HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

ಬೆಳ್ತಂಗಡಿ : ಈ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ವ್ಯಾಸಾಂಗ ಮಾಡುತ್ತಿರುವ ತಾಲೂಕಿನ ಬಿಲ್ಲವ ಸಮಾಜದ ವಿದ್ಯಾರ್ಥಿ ವಿದ್ಯಾರ್ಥಿಗಳಿಗೆ ಜ.14 ರಿಂದ ಪ್ರಾರಂಭವಾಗಲಿರುವ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶಾಸಕ ಸಂಘದ ಗೌರವಾಧ್ಯಕ್ಷ ಕೆ. ವಸಂತ ಬಂಗೇರರು ಜ.10 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಸಂಘದ ಉಪಾಧ್ಯಕ್ಷೆ ಹಾಗೂ ಶೈಕ್ಷಣಿಕ ಸಮಿತಿಯ ಪ್ರಧಾನ ಸಂಚಾಲಕಿ ಶ್ರೀಮತಿ ಸುಜಿತಾ ವಿ.ಬಂಗೇರ, ಸಂಘದ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಜತೆ ಕಾರ್ಯದರ್ಶಿ ಕರುಣಾಕರ ಸುವರ್ಣ ಮರೋಡಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಶ್ರೀಮತಿ ರಾಜಶ್ರೀ ರಮಣ್, ಸಂಘದ ನಿರ್ದೇಶಕರುಗಳಾದ ಶ್ರೀಮತಿ ಶಾಂಭವಿ ಪಿ. ಬಂಗೇರ, ಹರಿದಾಸ ಕೇದೆ, ಯಶೋಧರ ಚಾರ್ಮಾಡಿ, ಪಿ.ಜಾರಪ್ಪ ಪೂಜಾರಿ ಬೆಳಾಲು ಮೊದಲಾದವರು ಉಪಸ್ಥಿತರಿದ್ದರು. ಶೈಕ್ಷಣಿಕ ಕಾರ್ಯಾಗಾರ ಪ್ರತಿ ಆದಿತ್ಯವಾರ ಜ.14 ರಿಂದ ಮಾ.4ರ ವರೆಗೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *