HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬಿಜೆಪಿ ಯುವ ಮೋರ್ಚಾದಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾಮಿ ವಿವೇಕಾನಂದರ 155ನೇ ಜನ್ಮದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನ ಪ್ರಯುಕ್ತ ಇಂದು(ಜ. 12) ಯುವಭಾರತ ನವಭಾರತ ಕಾರ್ಯಕ್ರಮವು ಬೆಳ್ತಂಗಡಿ ಸುವರ್ಣ ಆರ್ಕೇಡ್‌ನ ಸಪ್ತಪದಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಿಜೆಪಿ ಮಂಗಳೂರು ವಿಭಾಗದ ಸಹಪ್ರಭಾರಿ ಪ್ರತಾಪ್‌ಸಿಂಹ ನಾಯಕ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸವಣಾಲು ಶ್ರೀ ರಾಮಕೃಷ್ಣ ಸೇವಾ ಸಮಿತಿ ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ ವಹಿಸಿದ್ದರು. ಬಿಜೆಪಿ ಮುಖಂಡ, ವಾಗ್ಮಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಮಂಡಲ ಅಧ್ಯಕ್ಷ ರಂಜನ್ ಜಿ. ಗೌಡ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಕಾರ್ಯಕ್ರಮ ಸಂಯೋಜಕ ಸುಧಾಕರ ಗೌಡ, ಕರುಣಾಕರ ಬಡಕೋಡಿ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕಿನ ಯುವ ಸಂಘಟನೆಗಳಿಗೆ ಯುವ ಸಾಧನಾ ಭೂಷಣ ಪುರಸ್ಕಾರ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *