ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯದಾದ್ಯಂತ 4500ಕ್ಕೂ ಮಿಕ್ಕಿ ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನಾಡಿನಾದ್ಯಂತ ಸ್ವಚ್ಛತಾ ಕೇಂದ್ರಗಳ ಅಭಿಯಾನವನ್ನು ಪ್ರಾರಂಭಿಸಿದ್ದರು. ಕಳೆದ ಎರಡು ವರ್ಷದಲ್ಲಿ ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು. ಪ್ರಸ್ತುತ ವರ್ಷ ಮಕರ ಸಂಕ್ರಾಂತಿಯ ಪರ್ವಕಾಲದಲ್ಲಿ ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಾದ್ಯಂತ ಕೈಗೊಂಡು ಶ್ರದ್ಧಾ ಕೇಂದ್ರಗಳ ಸ್ವಚ್ಛತೆಯನ್ನು ಕಾಪಾಡಿ ಕೊಳ್ಳಬೇಕೆಂದು ಸಂದೇಶ ನೀಡಿದ್ದರು.
ಈ ಸಂದೇಶಕ್ಕೆ ಸ್ಪಂದಿಸಿದ ಭಕ್ತಾದಿಗಳು ರಾಜ್ಯದಾದ್ಯಂತ ಮಂದಿರ, ಬಸದಿ, ಚರ್ಚ್ ಹಾಗೂ ಮಸೀದಿ ಒಳಗೊಂಡಂತೆ ಸುಮಾರು 4500ಕ್ಕೂ ಮಿಕ್ಕಿದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಮಹಾ ಅಭಿಯಾನವನ್ನು ಕೈಗೊಂಡು ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಗೊಳಿಸಿದ್ದಾರೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಎಚ್.ಮಂಜುನಾಥ್ ತಿಳಿಸಿದ್ದಾರೆ.
ಈ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನದಲ್ಲಿ ದೇವಳದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಸ್ಥಳೀಯ ಜನಜಾಗೃತಿ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲಾ ಅಧಿಕಾರಿ ವರ್ಗದವರು, ಊರಗಣ್ಯರು, ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಂತಾದವರು ಕೈ ಜೋಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಕಾರ್ಯಕ್ರಮದ ವಿಶೇಷತೆಗಳು :
1. ದೇವಳದ ಸುತ್ತಮುತ್ತಲಿನ ಗಿಡಗಂಟಿ, ಕಸಕಡ್ಡಿಗಳನ್ನು ತೆಗೆದು ಸ್ವಚ್ಛತೆಗೊಳಿಸಲಾಗಿದೆ. 2. ದೇವಳದ ಒಳಗಡೆ ಮತ್ತು ಹೊರಗಡೆ ಸ್ವಚ್ಛಗೊಳಿಸಲಾಗಿದೆ. 3. ಮಂದಿರ, ಮಸೀದಿ, ಚರ್ಚ್ ಹಾಗೂ ಬಸದಿಗಳಲ್ಲಿ ಸಾಮೂಹಿಕವಾಗಿ ಭಕ್ತಾದಿಗಳು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. 4. ಬೆಂಗಳೂರು ದೊಡ್ಡ ಬಳ್ಳಾಪುರಗಳಲ್ಲಿ ಆಶ್ರಮಗಳಲ್ಲಿಯೂ ಸ್ವಚ್ಛತಾಕಾರ್ಯ ನಡೆಸಲಾಗಿತ್ತು. 5. ದೇವಾಲಯದ ಸ್ವತ್ತುಗಳು ಸಲಕರಣೆಗಳು ಹಾಗೂ ಪೂಜಾ ಸಾಮಾಗ್ರಿಗಳನ್ನು ಸ್ವಚ್ಛಗೊಳಿಸಲಾಗಿದೆ. 6. ಬಂಗಾರಪೇಟೆಯಲ್ಲಿ ಪುಷ್ಕರಣಿಗಳ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. 7. 242 ಶುದ್ಧಗಂಗಾ ಕುಡಿಯುವ ನೀರಿನ ಘಟಕ, 42 ರುದ್ರಭೂಮಿಗಳಲ್ಲಿ ಸ್ವಚ್ಛತಾಕಾರ್ಯ ಕೈಗೊಳ್ಳಲಾಯಿತು. 8. ಸ್ವಚ್ಛತಾ ಕಾರ್ಯಕ್ರಮದ ನಂತರ ಮುಂದಿನ ದಿನಗಳಲ್ಲಿ ಸ್ವಚ್ಛತಾಕಾರ್ಯವನ್ನು ಮುಂದುವರಿಸಿ ಕೊಂಡು ಹೋಗುವ ಬಗ್ಗೆ ಜಾಗೃತಿ ದಳಗಳನ್ನು ರಚಿಸಲಾಗಿದೆ. ಈಗಾಗಲೇ 173 ಜಾಗೃತಿ ದಳ ರಚನೆಗೊಂಡಿದೆ. 9. ಪುರಸಭೆ, ನಗರಸಭೆ, ಹಾಗೂ ಗ್ರಾಮ ಪಂಚಾಯತ್‌ಗಳಿಂದ ಕಸ ವಿಲೇವಾರಿಗಾಗಿ ವಾಹನಗಳನ್ನು ಒದಗಿಸಲಾಗಿತ್ತು. 10. ತುಮಕೂರು ಜಿಲ್ಲೆಯೊಂದರಲ್ಲಿಯೇ 20000ಕ್ಕೂ ಮಿಕ್ಕಿದ ಕಾರ್ಯಕರ್ತರು 450 ಶ್ರದ್ಧಾಕೇಂದ್ರಗಳಲ್ಲಿ ಒಂದೇ ದಿನದಲ್ಲಿ ಸ್ವಚ್ಛಗೊಳಿಸಿದರು. 11. ನಗರಸಭೆಯ ಅಧ್ಯಕ್ಷರುಗಳು, ಸದಸ್ಯರುಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಶಾಸಕರುಗಳು, ಮೇಯರ್, ಉಪಮೇಯರ್, ದೇವಳದ ಅರ್ಚಕರು ಮುಂತಾದವರು ಕೆಲವೊಂದು ಕಡೆ ಭಾಗವಹಿಸಿದ್ದು ಈ ಕಾರ್ಯಕ್ರಮದ ವಿಶೇಷತೆಯಾಗಿದೆ. ಮಕರ ಸಂಕ್ರಾಂತಿಯ ಸ್ವಚ್ಛತಾ ಅಭಿಯಾನದಲ್ಲಿ ಒಟ್ಟು 4642 ಶ್ರದ್ಧಾ ಕೇಂದ್ರಗಳನ್ನು ಸ್ವಚ್ಛಗೊಳಿಸಲಾಗಿದೆ. ಇದರಲ್ಲಿ 2.5 ಲಕ್ಷ ಜನರು ಭಾಗವಹಿಸಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಅತ್ಯಂತ ಸಂತೋಷ ವ್ಯಕ್ತಪಡಿಸಿದ್ದಾರೆ. ಅದರಂತೆ ಮುಂದೆಯೂ ಈ ಕಾರ್ಯಕ್ರಮದ ನಿರಂತರತೆಯನ್ನು ಕಾಪಾಡಿಕೊಂಡು ಶ್ರದ್ಧಾ ಕೇಂದ್ರಗಳು ಸ್ವಚ್ಛತೆ ಮತ್ತು ಪರಿಸರ ಶಾಂತತೆಯಿಂದ ಕೂಡಿ ಬರಲೆಂದು ಶುಭಹಾರೈಸಿದ್ದಾರೆ. ಪ್ರತಿ ಶ್ರದ್ಧಾ ಕೇಂದ್ರಗಳಲ್ಲಿಯೂ ಸ್ವಚ್ಛತಾ ಜಾಗೃತಿ ದಳವನ್ನು ರಚಿಸುವ ಮೂಲಕ ಸ್ವಚ್ಛ ಸಮಾಜ ನಿರ್ಮಾಣವಾಗಬೇಕೆಂದು ನುಡಿದಿದ್ದಾರೆ. ಕಾರ್ಯಕ್ರಮಕ್ಕೆ ಸಹಕರಿಸಿ ಯಶಸ್ವಿಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಲಕ್ಷಾಂತರ ಕಾರ್ಯ ಕರ್ತರಿಗೆ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್.ಮಂಜುನಾಥ್ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.