ಡಾ. ಎಸ್.ಡಿ. ಶೆಟ್ಟಿಯವರಿಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿಯ ಗೌರವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಬೆಂಗಳೂರಿನ ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟದವರು ನೀಡುವ 2018ರ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿಗೆ ಉಜಿರೆಯ ಎಸ್.ಡಿ.ಎಂ. ಕಾಲೇಜಿ ನಲ್ಲಿರುವ ಡಾ. ಹಾ.ಮಾ.ನಾ. ಸಂಶೋಧನಾ ಕೇಂದ್ರದ ನಿರ್ದೇಶಕ ಹಾಗೂ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ (ಶಾಂತಿನಾಥ ದೀಪಣ್ಣ ಶೆಟ್ಟಿ) ಅವರನ್ನು ಆಯ್ಕೆ ಮಾಡಲಾ ಗಿದೆ ಎಂದು ಜೈನ ಮೈತ್ರಿ ಕೂಟದ ಅಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಜ. 26 ರಂದು ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಬಸವನಗುಡಿಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಡಾ. ಎಸ್.ಡಿ. ಶೆಟ್ಟಿ ಅವರು ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಮಾಡಿದ ಸೇವೆ ಹಾಗೂ ಸಾಧನೆಯನ್ನು ಮನ್ನಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. -ಆರ್. ಯನ್. ಪೂವಣಿ, ಉಜಿರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.