ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮೂಡಪ್ಪ ಸೇವೆ

Advt_NewsUnder_1
Advt_NewsUnder_1

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಷ್ಟೋತ್ತರ ಶತನಾಳಿಕೇರ ಮಹಾಗಣಪತಿ ಹೋಮ ಮತ್ತು ಮೂಡಪ್ಪ ಸೇವೆ ಜ. 21ರಂದು ಜರಗಿತು.
ಸಂಜೆ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸಮಿತಿ ಸದಸ್ಯರಾದ ವಿಶ್ವನಾಥ ಕೊಲ್ಲಾಜೆ, ವಿಶ್ವನಾಥ ಶೆಟ್ಟಿ, ಪ್ರಶಾಂತ್ ರೈ, ಅಣ್ಣಪ್ಪ ಗೌಡ, ಪಿ.ಕೆ ಗಣೇಶ್, ಕಾರ್ಯನಿರ್ವಾಹಣಾಧಿಕಾರಿ ಹರಿಶ್ಚಂದ್ರ, ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ್ ಭಟ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಸಹಕರಿಸಿದ ಕುಡ್ತುಲಾಜೆ ಕೃಷ್ಣ ಭಟ್, ಕುಡ್ತುಲಾಜೆ ವಿಶ್ವನಾಥ ಭಟ್, ಬೆಂಗಳೂರಿನ ರಮೇಶ್, ಡೈರಿ ಡೇ.ನ ಪ್ರತೀಕ್ ಜೈನ್, ವಿಶ್ವನಾಥ ಶೆಟ್ಟಿ, ರಾಘವ ಕೊಲ್ಲಾಜೆ, ವಿಶ್ವನಾಥ ಕೊಲ್ಲಾಜೆ, ಇವರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.