ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಘಟಕ ಉದ್ಘಾಟನೆ

ಬೆಳ್ತಂಗಡಿ : ಮಂಜುಶ್ರೀ ಸೀನಿಯರ್ ಛೇಂಬರ್ ಇದರ ಹತ್ತನೇ ನೂತನ ತಾಲೂಕು ಘಟಕದ ಉದ್ಘಾಟನೆಯನ್ನು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾಮಂದಿರದ ಪಿನಾಕಿ ಸಭಾಭವನದಲ್ಲಿ ಜ. 20 ರಂದು ಹೊರನಾಡು ಶ್ರೀ ಕ್ಷೇತ್ರ ಅನ್ನಪೂರ್ಣೇಶ್ವರೀ ದೇವಸ್ಥಾನದ ಧರ್ಮಕರ್ತರಾದ ಡಾ. ಜಿ ಭೀಮೇಶ್ವರ ಜೋಷಿ ಉದ್ಘಾಟಿಸಿದರು.
ಪದಗ್ರಹಣ ಪ್ರಕ್ರೀಯೆಯನ್ನು ಭಾರತೀಯ ಸೀನಿಯರ್ ಛೇಂಬರ್ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಅರವಿಂದ ರಾವ್ ಕೇದಗೆ ನಡೆಸಿಕೊಟ್ಟರು. ಜೇಷ್ಠ ಸ್ಮರಣ ಸಂಚಿಕೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಬಿಡುಗಡೆಗೊಳಿಸಿದರು. ಮಂಗಳೂರು ಸೀನಿಯರ್ ಛೇಂಬರ್ ಅಧ್ಯಕ್ಷ ಆಶಿಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಪೂರ್ವ ಜೇಸಿ ರಾಷ್ಟ್ರೀಯ ತರಬೇತುದಾರ ಮನೋಹರ ಅಮೀನ್, ಅತಿಥಿಯಾಗಿದ್ದ ರೋಟರಿ ಕ್ಲಬ್ ಅಧ್ಯಕ್ಷ ಡಾ. ಸುಧೀರ್ ಪ್ರಭು, ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಶುಭ ಕೋರಿದರು.
ಸೀನಿಯರ್ ಛೇಂಬರ್ ಇದರ ಪ್ರಮಾಣವಚನವನ್ನು ರಾಷ್ಟ್ರೀಯ ಉಪಾಧ್ಯಕ್ಷ ಡಾ. ಅರವಿಂದ ರಾವ್ ಕೇದಗೆ ನೆರವೇರಿಸಿದರು. ಸ್ಥಾಪಕ ಅಧ್ಯಕ್ಷರಾಗಿ ಪ್ರಮೋದ್ ಆರ್ ನಾಯಕ್ ಪದಗ್ರಹಣ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.