ಬುಳೆಕ್ಕಾರ ಭಜನಾ ಮಂದಿರದ ವಾರ್ಷಿಕೋತ್ಸವ ಸತ್ಯದ ನಡೆಯೇ ನಿಜವಾದ ಧರ್ಮ: ಶ್ರೀನಿವಾಸ ಗೌಡ

Advt_NewsUnder_1
Advt_NewsUnder_1
Advt_NewsUnder_1

ಕುಕ್ಕೇಡಿ: ಭಜನೆಯಲ್ಲಿ ಭಾಗವಹಿಸುವಿಕೆಯಿಂದ ಧರ್ಮ ಬೆಳೆಯುತ್ತದೆ. ಆದರೆ ಕೇವಲ ದೇವರ ದರ್ಶನದಿಂದ ಧರ್ಮ ಉಳಿಯಲು ಸಾಧ್ಯವಿಲ್ಲ. ಅದಕ್ಕಾಗಿ ಧರ್ಮದ ದಾರಿಯಲ್ಲಿ ನಡೆಯಬೇಕು. ಸತ್ಯದ ನಡೆಯೇ ನಿಜವಾದ ಧರ್ಮ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೇಣೂರು ವಲಯ ಮೇಲ್ವಿಚಾರಕ ಶ್ರೀನಿವಾಸ ಗೌಡ ಅಭಿಪ್ರಾಯ ಪಟ್ಟರು.
ಅವರು ಬುಳೆಕ್ಕಾರ ಶ್ರೀ ಶಾರದಾಂಬ ಭಜನಾ ಮಂದಿರದ 28ನೇ ವಾರ್ಷಿಕೋತ್ಸವ, ಆಶ್ಲೇಷ ಪೂಜೆ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಜ. 21 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪುರಿಯ ಹಾಲು ಉ.ಸ. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಯು.ಎಸ್. ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಮಾತನಾಡಿ, ಸಕಲ ಜೀವರಾಶಿಗಳನ್ನು ಪೂಜಿಸುವ ಸಂಸ್ಕೃತಿ ನಮ್ಮಲ್ಲಿದೆ. ಆದರೆ ಮನುಷ್ಯರ ಮಧ್ಯೆ ಪ್ರೀತಿ, ವಿಶ್ವಾಸ ಕಡಿಮೆ ಆಗಿದೆ. ಧರ್ಮಾಚರಣೆಯಲ್ಲಿ ಬಡವರಿಗೂ ಸ್ಥಾನಮಾನ ದೊರೆಯುವಂತಾಗಬೇಕು ಎಂದರು. ವೇಣೂರು ತಾ.ಪಂ. ಸದಸ್ಯ ಕೆ. ವಿಜಯ ಗೌಡ ಮಾತನಾಡಿ, ಸಂಸ್ಕೃತಿ, ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ದಾಟಿಸುವ ಕೆಲಸ ಬುಳೆಕ್ಕಾರ ಭಜನಾ ಮಂಡಳಿ ಮಾಡುತ್ತಿದೆ ಎಂದರು.
ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಸ.ಹಿ.ಪ್ರಾ. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಭಾಸ್ಕರ, ಗರ್ಡಾಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಹರೀಶ್ ಕೋಟ್ಯಾನ್, ಕುಕ್ಕೇಡಿ ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ಅಧ್ಯಕ್ಷ ಸತೀಶ್ ಕೋಟ್ಯಾನ್, ಬುಳೆಕ್ಕಾರ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಪ್ಪ ಕುಲಾಲ್, ಕುಕ್ಕೇಡಿ ಒಕ್ಕೂಟದ ಅಧ್ಯಕ್ಷ ನಾರಾಯಣ ಶೆಟ್ಟಿ, ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ಅಧ್ಯಕ್ಷ ಅನಿಲ್ ಹೆಗ್ಡೆ, ಪುರಿಯ ವಿಕ್ರಮ್ ಯುವಕ ಮಂಡಲದ ಅಧ್ಯಕ್ಷ ಗೋಪಾಲ ಶೆಟ್ಟಿಗಾರ್, ಬುಳೆಕ್ಕಾರ ಗೆಳೆಯರ ಬಳಗದ ಅಧ್ಯಕ್ಷ ಹರೀಶ್ ಬಂಗೇರ, ಭಜನಾ ಮಂಡಳಿ ಅಧ್ಯಕ್ಷ ನಾರಾಯಣ ನಾಯ್ಕ, ಮಹಿಳಾ ಸಮಿತಿ ಅಧ್ಯಕ್ಷೆ ನಿರಂಜನಿ ಜೆ.ಶೆಟ್ಟಿ, ಕಾರ್ಯಾಧ್ಯಕ್ಷ ಸತೀಶ್ ಬಂಗೇರ, ಕಾರ್ಯದರ್ಶಿ ಸುಕೇತ್ ಕುಮಾರ್, ಜತೆ ಕಾರ್ಯದರ್ಶಿ ವಿಠಲ ದೇವಾಡಿಗ, ಕೋಶಾಧಿಕಾರಿ ಹರೀಶ್ ದೇವಾಡಿಗ, ಭಜನಾ ಸಂಚಾಲಕ ಜಗದೀಶ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನವೀನ್ ಜಿ. ಸ್ವಾಗತಿಸಿ, ಮಂಡಳಿಯ ಪ್ರ. ಕಾರ್ಯದರ್ಶಿ ಪ್ರವೀಣ್ ಪೂಜಾರಿ ವಂದಿಸಿದರು. ಶಿವರಾಮ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.