HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಡಾ. ಎಸ್.ಡಿ. ಶೆಟ್ಟಿಯವರಿಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪ್ರದಾನ

ಉಜಿರೆ: ಬೆಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟದ ವತಿಯಿಂದ ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಡಾ. ಹಾ.ಮಾ.ನಾ. ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಎಸ್.ಡಿ. ಶೆಟ್ಟಿ ಅವರಿಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನಲ್ಲಿರುವ ಎಸ್.ಡಿ.ಎಂ. ಕಲ್ಯಾಣ ಮಂಟಪದಲ್ಲಿ ಜ.26 ರಂದು ನಡೆದ ಸಮಾರಂಭದಲ್ಲಿ ಕೊಳದಮಠದ ಶಾಂತವೀರ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿದರು. ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟದ ಅಧ್ಯಕ್ಷ ಡಿ. ಸುರೇಂದ್ರ ಕುಮಾರ್, ಕಾರ್ಯಾಧ್ಯಕ್ಷ ಕೆ.ಬಿ. ಯುವರಾಜ ಬಳ್ಳಾಲ್, ಅನಿತಾ ಸುರೇಂದ್ರ ಕುಮಾರ್ ಕಾರ್ಯದರ್ಶಿ ಕೆ. ಗುಣಪಾಲ ಜೈನ್ ಮತ್ತು ಸುಗುಣಾ ಎಸ್.ಡಿ. ಶೆಟ್ಟಿ ಉಪಸ್ಥಿತರಿದ್ದರು. ಪ್ರಶಸ್ತಿಯು ರೂ. 25,000 ನಗದು, ಫಲಕ ಮತ್ತು ಪ್ರಮಾಣ ಪತ್ರ ಒಳಗೊಂಡಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.