HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಅಕ್ಷರ ದಾಸೋಹ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಪ್ರಚಾರಕ್ಕಾಗಿ ಜಾಹೀರಾತು ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡುವ ಕೇಂದ್ರ, ರಾಜ್ಯ ಸರ್ಕಾರಗಳು ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ವೇತನ ನೀಡಲು ಏನು ಸಮಸ್ಯೆ ಎಂದು ಸಿಐಟಿಯು ತಾಲೂಕು ಅಧ್ಯಕ್ಷ ಶಿವಕುಮಾರ್ ಎಸ್.ಎಂ ಪ್ರಶ್ನಿಸಿದರು. ಅವರು ಅಕ್ಷರ ದಾಸೋಹ ನೌಕರರ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಎದುರು ನಡೆದ ಅನಿರ್ದಿಷ್ಟಾವಧಿ ಮುಷ್ಕರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅಕ್ಷರ ದಾಸೋಹ ನೌಕರರ ಬೇಡಿಕೆ ಈಡೇರಿಸುವ ಬದಲಾಗಿ ಇಡೀ ಯೋಜನೆಯನ್ನು ಖಾಸಗೀಕರಣ ಮಾಡಲು ಮುಂದಾಗಿದೆ ಎಂದ ಅವರು ೨೦೧೧ ರಿಂದ ನೌಕರರ ವೇತನ ಹೆಚ್ಚಳ ಮಾಡದ ಕೇಂದ್ರ ಸರಕಾರ ಭೇಟಿ ಬಚಾವ್ ಪೊಳ್ಳು ಘೋಷಣೆ ಮಾಡುತ್ತಿದೆ ಎಂದ ಅವರು ಸಿಐಟಿಯು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ತನಕ ಶಾಲೆಗಳಲ್ಲಿ ಬಿಸಿಯೂಟ ಇರುವುದಿಲ್ಲ ಎಂದರು. ಪ್ರತಿಭಟನೆಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಲಲಿತಾ ಮದ್ದಡ್ಕ ಮಾತನಾಡಿ ನ್ಯಾಯಯುತ ಹೋರಾಟವನ್ನು ತಡೆಯುವ ನಿಟ್ಟಿನಲ್ಲಿ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ನೌಕರರಿಗೆ ಬೆದರಿಕೆ ಒಡ್ಡಿರುವ ಘಟನೆಯನ್ನು ಖಂಡಿಸಿದ ಅವರು ಯಾವುದೇ ಬೆದರಿಕೆಗಳಿಗೆ ಬಗ್ಗದೆ ಬೇಡಿಕೆಗಳನ್ನು ಈಡೇರಿಸುವ ತನಕ ಅನಿರ್ದಿಷ್ಟಾವಧಿ ಹೋರಾಟ ಯಶಸ್ವಿಯಾಗೊಳಿಸುತ್ತೇವೆ ಎಂದು ಎಚ್ಚರಿಸಿದರು. ಸಿಐಟಿಯು ತಾಲೂಕು ಕಾರ್ಯದರ್ಶಿ ವಸಂತ ನಡ ಮಾತನಾಡಿ ಬಿಸಿಯೂಟ ನೌಕರರಿಗೆ ಮಾಸಿಕ. ರೂ ೧೦೦೦ ದಿಂದ ರೂ ೨೦೦೦ ನೀಡುವ ಸರಕಾರಗಳು ಶಾಸಕ, ಸಂಸದರಿಗೆ ಮಾಸಿಕ ಎಷ್ಟು ವೇತನ ನೀಡುತ್ತಿದೆ ಎಂದು ಪ್ರಶ್ನಿಸಿದ ಅವರು ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ರೂ ೧೦೦೦ ಇದರಲ್ಲಿ ಜೀವನ ಸಾಗಿಸಲು ಸಾಧ್ಯವಿಲ್ಲ ಈ ಕಾರಣಕ್ಕಾಗಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು. ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯ ಶೇಖರ್ ಎಲ್, ಸಿಐಟಿಯು ಮುಖಂಡ ಅನಿಲ್ ಎಂ ಮಾತನಾಡಿದರು. ನೇತೃತ್ವವನ್ನು ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯದರ್ಶಿ ಸುಮಿತ್ರಾ ಅರಸಿನಮಕ್ಕಿ, ಸರೋಜ ನಾಳ, ಸರೋಜಿನಿ ಗುರುವಾಯನಕೆರೆ, ಸಿಐಟಿಯು ರಾಜ್ಯ ಸಮಿತಿ ಸದಸ್ಯೆ ರೋಹಿಣಿ ಪೆರಾಡಿ, ನ್ಯಾಯವಾದಿ ಸುಕುನ್ಯಾ ಹೆಚ್, ಸಿಐಟಿಯು ಮುಖಂಡರಾದ ಕೃಷ್ಣ ನೆರಿಯ, ಬದ್ರುದ್ದೀನ್ ದೇರ್ಲಕ್ಕಿ ವಹಿಸಿದ್ದರು.

Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.