HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕೇಳ-ಕಾಶಿಪಟ್ಣ ವಾರ್ಷಿಕ ಜಾತ್ರೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭೆ

ಕಾಶಿಪಟ್ಣ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ-ಕಾಶಿಪಟ್ಣ ಇಲ್ಲಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ಜರಗಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಶಿಪಟ್ಣ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಫೆ.20 ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅರ್ಚಕರಾದ ವೇದಮೂರ್ತಿ ಹರಿನಾರಾಯಣ ಅಸ್ರಣ್ಣರು ಆಶೀರ್ವಚನ ಮಾಡಿದರು. ಶ್ರೀ ಸತ್ಯನಾರಾಯಣ ಸೇವಾ ಸಮಿತಿಯ ಅಧ್ಯಕ್ಷ ಕೆ.ಅಶೋಕ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಅನಂತ ಅಸ್ರಣ್ಣ, ಕಾಶಿಪಟ್ಣ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ., ಶ್ರೀ ಕ್ಷೇ.ಧ.ಗ್ರಾ.ಯೋ ಯೋಜನಾಧಿಕಾರಿ ಜಯಕರ ಶೆಟ್ಟಿ, ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪಿ.ಕೆ ರಾಜು ಪೂಜಾರಿ ಭಾಗವಹಿಸಿದ್ದರು. ಶ್ರೀ ಕ್ಷೇ.ಧ.ಗ್ರಾ.ಯೋಜನೆ ನಾರಾವಿ ವಲಯ ಮೇಲ್ವಿಚಾರಕ ಗಿರೀಶ್ ಕುಮಾರ್ ಎಂ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರುಗಳಾದ ವಸಂತ ಕೋಟ್ಯಾನ್, ಎಂ.ಸುಬ್ಬಣ್ಣ ಸಾಲ್ಯಾನ್, ಉಮೇಶ್ ಶೆಟ್ಟಿ, ಯೋಜನೆಯ ಸೇವಾ ಪ್ರತಿನಿಧಿಗಳಾದ ಶ್ರೀಮತಿ ಶಶಿಕಲಾ, ಶ್ರೀಮತಿ ಲೀಲಾವತಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಎಲ್ಲಪ್ಪ ನಾಯ್ಕ ಹಾಗೂ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು, ಸ್ವ-ಸಹಾಯ ಸಂಘ ಮತ್ತು ಜ್ಞಾನವಿಕಾಸ ಕೇಂದ್ರಗಳ ಸದಸ್ಯರು, ಊರವರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.