HomePage_Banner_
HomePage_Banner_
HomePage_Banner_

ವೇಣೂರು: ಗುರುಜಯಂತಿ, ಗುರುಪೂಜೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಸನ್ಮಾನ : ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಯಂತ್ ಕೋಟ್ಯಾನ್ ಕುಕ್ಕೇಡಿ, ಓಬಯ್ಯ ಪೂಜಾರಿ ಹೊಸಪಟ್ಣ, ನಾರಾಯಣ ಪೂಜಾರಿ ನೇರಳ್‌ಪಲ್ಕೆ ಹಾಗೂ ಆನಂದ ಪೂಜಾರಿ ಉರುಂಜಿಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಸನ್ಮಾನಪತ್ರವನ್ನು ನವೀನ್ ಪಚ್ಚೇರಿ, ಭಾಸ್ಕರ ಪೂಜಾರಿ ನಾಯರ್‍ಮೇರು, ಸತೀಶ್ ಪಿ.ಎನ್., ಹರೀಶ್ ಕುಮಾರ್ ಪೊಕ್ಕಿ ವಾಚಿಸಿದರು.

ವೇಣೂರು: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು ವಲಯ ಹಾಗೂ ಯುವವಾಹಿನಿ ವೇಣೂರು ಘಟಕದ ಆಶ್ರಯದಲ್ಲಿ 163ನೇ ಗುರುಜಯಂತಿ, ಗುರುಪೂಜೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜೆಪಿ ಟವರ್ ಸಭಾಂಗಣದಲ್ಲಿ ಜರಗಿತು. ಸಮಾರಂಭವನ್ನು ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು. ವೇಣೂರು ಶ್ರೀ ಗು.ನಾ.ಸ್ವಾ.ಸೇ. ಸಂಘದ ಅಧ್ಯಕ್ಷ ಪೂವಪ್ಪ ಪೂಜಾರಿ ಪರನೀರು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಭಾಷಣಕಾರರಾಗಿ ಬಂಟ್ವಾಳದ ನಿವೃತ್ತ ಕಂದಾಯ ಅಧಿಕಾರಿ ತಮ್ಮಯ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಮರೋಳಿ, ಮಂಗಳೂರು ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್, ಬೆಳ್ತಂಗಡಿ ಯುವಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಕುಮಾರ್ ಉಪ್ಪಾರು, ಬೆಳ್ತಂಗಡಿ ಘಟಕದ ಯುವವಾಹಿನಿ ಅಧ್ಯಕ್ಷ ಪ್ರಶಾಂತ್ ಮಚ್ಚಿನ, ಮೂಡಬಿದಿರೆ ಯುವವಾಹಿನಿ ಘಟಕದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ಬಿಲ್ಲವ ಏಕೀಕರಣ ಸಮಿತಿ ಅಧ್ಯಕ್ಷ ರವಿಕುಮಾರ್ ಮಜಲು, ಬಿರುವೆರ್ ಕುಡ್ಲ ಬೆಳ್ತಂಗಡಿ ಇದರ ಅಧ್ಯಕ್ಷ ರಾಜೇಶ್ ಉಜಿರೆ, ಕಾರ್ಯದರ್ಶಿ ಮಂಜುನಾಥ ಸಾಲ್ಯಾನ್, ಬೆಳ್ತಂಗಡಿ ಯುವವಾಹಿನಿ ಘಟಕದ ಕಾರ್ಯದರ್ಶಿ ಜಯರಾಜ್ ನಡಕ್ಕರ, ಜತೆ ಕಾರ್ಯದರ್ಶಿ ಕರುಣಾಕರ ಮರೋಡಿ, ಸಂಘಟನಾ ಕಾರ್ಯದರ್ಶಿ ಸಚಿನ್ ಕುಮಾರ್, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ನಿರ್ದೇಶಕರಾದ ಸೂರ್ಯನಾರಾಯಣ ಡಿ.ಕೆ, ಶಾಂಭವಿ ಬಂಗೇರ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ವೇಣೂರು ಶ್ರೀ ಗು.ನಾ.ಸ್ವಾ.ಸೇ. ಸಂಘದ ಕಾರ್ಯದರ್ಶಿ ರಾಕೇಶ್ ಕುಮಾರ್ ವರದಿ ವಾಚಿಸಿ, ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ನಿತೀಶ್ ಎಚ್. ಸ್ವಾಗತಿಸಿದರು. ವೇಣೂರು ಯುವವಾಹಿನಿ ಘಟಕದ ಉಪಾಧ್ಯಕ್ಷ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ಪ್ರವೀಣ್ ಜಾರಿಗೆದಡಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.