ಯಕ್ಷಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕದ ವಾರ್ಷಿಕೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ವಾರ್ಷಿಕೋತ್ಸವವು ಮಾ. 28 ರಂದು ಬೆಳ್ತಂಗಡಿಯ ಸುವರ್ಣ ಆರ್ಕೆಡ್ ನ ಸಪ್ತಪದಿ ಸಭಾಭವನದಲ್ಲಿ ಜರುಗಿತು.
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಬಳಗದವರಿಂದ ಚಂದ್ರಾವಳಿ ವಿಲಾಸ ಯಕ್ಷಗಾನ ಹಾಸ್ಯ ವೈಭವ ನಡೆಯಿತು.
ಬೆಳ್ತಂಗಡಿ ನ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್‌ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಯು.ವಿಜಯ ರಾಘವ ಪಡ್ವೆಟ್ನಾಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ನ್ಯಾಯವಾದಿ ಕೆ ಪ್ರತಾಪ್‌ಸಿಂಹ ನಾಯಕ್, ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬೆಳ್ತಂಗಡಿ ಘಟಕ ಅಧ್ಯಕ್ಷ ಭುಜಬಲಿ ಬಿ ಧರ್ಮಸ್ಥಳ, ಬೆಳ್ತಂಗಡಿ ಘಟಕ ಸಂಚಾಲಕ ರಘುರಾಮ ಶೆಟ್ಟಿ ಸಾಧನಾ ಉಜಿರೆ ಉಪಸ್ಥಿತರಿದ್ದರು.
ಹಿಮ್ಮೇಳದಲ್ಲಿ ಭಾಗವತರಾಗಿ ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ , ರವಿಚಂದ್ರ ಕನ್ನಡಿಕಟ್ಟೆ, ಮುಮ್ಮೇಳದಲ್ಲಿ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಸೀತಾರಾಮ ಕುಮಾರ್ ಕಟೀಲ್ ಸಂತೋಷ್ ಕುಮಾರ್ ಹಿಲಿಯಾಣ, ಪ್ರಜ್ವಲ್ ಗುರುವಾಯನಕೆರೆ ಬಂಟ್ವಾಳ ಜಯರಾಮ ಆಚಾರ್ಯ, ಉಜಿರೆ ನಾರಾಯಣ, ರಕ್ಷಿತ್ ಪಡ್ರೆ, ವಿಶ್ವನಾಥ ಎಡನೀರು ಇವರುಗಳು ಭಾಗವಹಿಸಿದರು.
ಲಕ್ಷ್ಮೀ ಮಚ್ಚಿನ ಪ್ರಸ್ತಾವನೆಗೈದರು. ಸಂಪತ್ ಬಿ ಸುವರ್ಣ ಸ್ವಾಗತಿಸಿದರು. ಕಿಶೋರ್ ಶೆಟ್ಟಿ ಅರಸಿನಮಕ್ಕಿ ನಿರೂಪಿಸಿದರು.‌
ಕಾರ್ಯಕ್ರಮದಲ್ಲಿ ಯಕ್ಷಗಾನ ಹಾಸ್ಯ ಕಲಾವಿದ ಉಜಿರೆ ನಾರಾಯಣ ಪೂಜಾರಿ ಅವರಿಗೆ ಒಂದು ಲಕ್ಷ ರೂ ಸಹಾಯಧನದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ದೆಹಲಿ ಘಟಕದ ಪೃತ್ವಿ, ಪಟ್ಲ ಫೌಂಡೇಶನ್ ಪುರುಷೋತ್ತಮ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.