ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ವಸಂತ ಬಂಗೇರರ ಚುನಾವಣಾ ಪ್ರಚಾರದ ಅಧಿಕೃತ ಉದ್ಘಾಟನೆ ಎ.9 ರಂದು ಬೆಳ್ತಂಗಡಿಯಲ್ಲಿ ನಡೆಯಿತು.
ಪಕ್ಷದ ಚುನಾವಣಾ ಪ್ರಚಾರ ಕಚೇರಿಯನ್ನು ಸ್ಟೇಟ್ ಬ್ಯಾಂಕ್ ಎದುರಿನ ಸಿಕ್ವೇರಾ ಬಿಲ್ಡಿಂಗ್ ನಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ವಸಂತ ಬಂಗೇರ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಇಚ್ಚಿಲ ಸುಂದರ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ ಅಜ್ರಿ, ಅಲ್ಪ ಸಂಖ್ಯಾತರ ಸಮಿತಿ ಅಧ್ಯಕ್ಷ ಬಿ ಅಶ್ರಫ್, ಜಿ ಪಂ ಸದಸ್ಯ ಶೇಖರ್ ಕುಕ್ಕೇಡಿ, ನಗರ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಕೆಪಿಸಿಸಿ ಸದಸ್ಯ ಪೀತಾಂಬರ ಹೇರಾಜೆ ಮೊದಲಾದವರು ಉಪಸ್ಥಿತರಿದ್ದರು