ಬೆಳ್ತಂಗಡಿ ಯುವವಾಹಿನಿ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ.

Advt_NewsUnder_1
Advt_NewsUnder_1

  ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ತಾಲೂಕಿನ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಬೆಳಕು ಎ. 8 ರಂದು ಸಂತೆಕಟ್ಟೆ ಸುವರ್ಣ ಆರ್ಕೇಡ್ ಸಭಾಭವನದಲ್ಲಿ ನಡೆಯಿತು.
ಕಾರ್ಯಾಗಾರವನ್ನು ಶಾಸಕ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಕೆ.ವಸಂತಬಂಗೇರ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸುತ್ತಾ ಎಸ್.ಎಸ್.ಎಲ್.ಸಿ ಬಳಿಕ ಮುಂದಿನ ಶಿಕ್ಷಣಕ್ಕೆ ಇಂತಹ ಕಾರ್ಯಾಗಾರ ಅತೀ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಮುಂದಿನ ಗುರಿಯನ್ನು ರೂಪಿಸಿಕೊಂಡು ಉಜ್ವಲ ಭವಿಷ್ಯದೊಂದಿಗೆ ಮುನ್ನಡೆದು ಗುರಿಯನ್ನು ಸಾಧಿಸಲು ಕಠಿಣ ಪರಿಶ್ರಮ ಅಗತ್ಯ ಎಂದರು.
ಜೆ.ಸಿ.ಐ ರಾಷ್ಟ್ರೀಯ ತರಬೇತುದಾರ ಜೆ.ಸಿ ರಾಜೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಯುವವಾಹಿನಿ ಬೆಳ್ತಂಗಡಿ ಘಟಕ ಅಧ್ಯಕ್ಷ ಪ್ರಶಾಂತ್ ಮಚ್ಚಿನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರಾ ವರ್ಪಾಳೆ, ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್.ಬಿ.ಸುವರ್ಣ, ಗುರುವಾಯನಕೆರೆ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ, ಯುವವಾಹಿನಿ ಕೇಂದ್ರ ಘಟಕದ ಸಂಘಟನಾ ಕಾರ್ಯದರ್ಶಿ ರಮಾನಂದ ಸಾಲಿಯಾನ್ ಮುಂಡೂರು, ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷ ರಾಜೇಶ್ ಭಾಗವಹಿಸಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ಸ್ವಾಗತಿಸಿ, ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಯುವವಾಹಿನಿ ಬೆಳ್ತಂಗಡಿ ಘಟಕದ ಕಾರ್ಯದರ್ಶಿ ಜಯಕರ ನಡಕ್ಕರ, ಪದಾಧಿಕಾರಿಗಳು, ನಿರ್ದೇಶಕರುಗಳು ಉಪಸ್ಥಿತರಿದ್ದು, ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.