HomePage_Banner_
HomePage_Banner_
HomePage_Banner_

ಬೆಳ್ತಂಗಡಿ: ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ.

Advt_NewsUnder_1

ಬೆಳ್ತಂಗಡಿ: ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಛೇರಿಯ ಉದ್ಘಾಟನೆ ಎ.12 ರಂದು ಇಲ್ಲಿಯ ನಗರದ ಸಿಕ್ವೇರಾ ಕಾಂಪ್ಲೆಕ್ಸ್ ನಲ್ಲಿ ಜರುಗಿತು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೂತನ ಕಛೇರಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕ ಹಾಗೂ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಕೆ.ವಸಂತ ಬಂಗೇರ ,ಕೆ.ಪಿ.ಸಿ.ಸಿ ಸದಸ್ಯರಾದ ಪಿತಾಂಬರ ಹೇರಾಜೆ ಮತ್ತು ರಾಮಚಂದ್ರ ಗೌಡ, ಜಿ.ಪಂ ಸದಸ್ಯರಾದ ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಇಚ್ಚಿಲ ಸುಂದರ ಗೌಡ , ಮುಗುಳಿ ನಾರಾಯಣ ರಾವ್ , ಡಿ.ಸಿ.ಸಿ ಕಾರ್ಯದರ್ಶಿ ಜಗದೀಶ್.ಡಿ , ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಬಿ.ಎಂ .ಹಮೀದ್, ಮೋಹನ್  ಶೆಟ್ಟಿಗಾರ್ , ಯು.ಎ. ಹಮೀದ್, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ ರಾಜಶೇಖರ್ ಅಜ್ರಿ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಪೂಜಾರಿ, ಎ.ಪಿ.ಎಂ.ಸಿ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಪಿ.ಕೆ.ರಾಜು ಪೂಜಾರಿ, ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷ ಚಂದನ್ ಕಾಮತ್ ಮೊಲಾದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.