ಬೆಳ್ತಂಗಡಿ: ತಾ.ಪಂ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಬೆಳ್ತಂಗಡಿ ತಹಶೀಲ್ದಾರರಾದ ತಮ್ಮಣ್ಣ ಚಿನ್ನಪ್ಪ ಹಾದಿಮನಿ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು.
ಕಾರ್ಯನಿರ್ವಹಣಾಧಿಕಾರಿ ಬಸವರಾಜ್ ಅಯ್ಯಣ್ಣನವರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಖ್ಯಾತ ಸಾಹಿತಿ ಅರವಿಂದ ಚೊಕ್ಕಾಡಿ ಉಪನ್ಯಾಸ ನೀಡಿದರು. ಶಿಕ್ಷಕ ಮುರಳೀಧರ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.