ಗಾಂಜಾ ಮಾರಾಟ: ಇಬ್ಬರ ಬಂಧನ

ಅಬ್ದುಲ್ ಸಿನನ್                                                         ಮಹಮ್ಮದ್ ತೌಸೀಫ್

ಬೆಳ್ತಂಗಡಿ: ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಬೆಳ್ತಂಗಡಿಯ ಪೊಲೀಸರು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿ ರೂಪಾಯಿ 2 ಲಕ್ಷ ಮೌಲ್ಯದ 6 ಕೆ.ಜಿ ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಎ.13 ರಂದು ಉಜಿರೆ ಪರಿಸರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿ, ಕಾಜೂರು ನಿವಾಸಿ ಅಬ್ದುಲ್ ಸಿನನ್(22.ವ) ಹಾಗೂ ಮಹಮ್ಮದ್ ತೌಸೀಫ್ ರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ಪಿ.ಜಿ.ಸಂದೇಶ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಿರೀಶ್ ಕುಮಾರ್ ತಂಡ ದಾಳಿ ನಡೆಸಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.