HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕೆ.ಪಿ.ಸಿ.ಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಸಮಿತಿ ಸದಸ್ಯರಾಗಿ ಡಾ|ಹಾರಿಸ್ ದುಬೈ ಆಯ್ಕೆ.

 ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಾಮಾಜಿಕ ಜಾಲತಾಣ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾಗಿ (ಎನ್ನಾರೈ) ಸಾಮಾಜಿಕ ಮುಖಂಡ ಡಾ| ಅಬ್ದುಲ್ ಹಾರಿಸ್ ದುಬೈ ಆಯ್ಕೆಯಾಗಿದ್ದಾರೆ. ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ಘಟಕದ ರಾಜ್ಯ ಉಸ್ತುವಾರಿ ಶ್ರೀವತ್ಸ, ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ಉಸ್ತುವಾರಿ ರಮ್ಯಾ, ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಇವರ ಆದೇಶದ ಮೇರೆಗೆ ಆಯ್ಕೆಮಾಡಲಾಗಿದೆ. ಇವರು ಮೂಲತಃ ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಮಾಜಿ ಮಂಡಲ ಪ್ರಧಾನ ದಿ| ಎ.ಕೆ.ಮುಹಮ್ಮದಾಲಿ ಯವರ ಪುತ್ರರಾಗಿರುವ ಇವರು ಸಾಮಾಜಿಕ, ರಾಜಕೀಯ  ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.