ಎ.29: ಉಜಿರೆ ವ್ಯಾಘ್ರಚಾಮುಂಡಿ ಪ್ರತಿಷ್ಠಾ ವರ್ಧಂತ್ಯುತ್ಸವ.

 ಉಜಿರೆ: ಇಲ್ಲಿಯ ಓಡಲ ಚಾಮುಂಡಿನಗರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಸ್ವಾಗತದ್ವಾರ ಎ.29 ರಂದು ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಸಹಭಾಗಿತ್ವದಲ್ಲಿ ಪ್ರಧಾನ ಅರ್ಚಕ ವೇ|ಮೂ| ಪಿ. ರಾಜಗೋಪಾಲ ಯಡಪಡಿತ್ತಾಯರ ನೇತೃತ್ವದಲ್ಲಿ ಜರಗಲಿದೆ.
ಸ್ವಾಗತ ದ್ವಾರವನ್ನು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ.ಮೋಹನ ಆಳ್ವ ಉದ್ಘಾಟಿಸಲಿದ್ದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು, ನಂದಿಬೆಟ್ಟ ನಂದಿಕೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್. ಜಯರಾಮ ಶೆಟ್ಟಿ, ಬೆಂಗಳೂರಿನ ಸಮಾಜ ಸೇವಕ ಗೋಲ್ಡ್ ಮಂಜುನಾಥ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಕಲಶ ಪ್ರತಿಷ್ಠೆ, ಗಣಪತಿ ಹೋಮ, ಕಲಶಾಭಿಷೇಕ, ಚಂಡಿಕಾ ಹೋಮ ನಡೆಯಲಿದ್ದು, ಸಂಜೆ ಸ್ವಾಗತ ದ್ವಾರ ಉದ್ಘಾಟನೆ ಸಭೆ ಸನ್ಮಾನ ಕಾರ್ಯಕ್ರಮ ಜರಗಲಿದ್ದು, ಬಳಿಕ ದೈವಕ್ಕೆ ಎಣ್ಣೆ ಬೂಳ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ರಾತ್ರಿ ಶ್ರೀ ವ್ಯಾಘ್ರಚಾಮುಂಡಿ ನೇಮೋತ್ಸವ ಜರಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಎಂ.ಜಿ.ಶೆಣೈ ಮತ್ತು ವರ್ಧಂತ್ಯುತ್ಸವ ಸಮಿತಿ ಸಂಚಾಲಕ ವಿದ್ಯಾಕುಮಾರ್  ಕಾಂಚೋಡು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.