ಧರ್ಮಸ್ಥಳದಲ್ಲಿ 47ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ.

 ಉಜಿರೆ: ಧರ್ಮಸ್ಥಳದಲ್ಲಿ ಎ.29 ರಂದು ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ  131 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು.
ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಬೀಡಿನಲ್ಲಿ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ, ಶಾಲು ಮತ್ತು ಅಂಗಿ ವಿತರಿಸಿದರು. ವಧೂ-ವರರು ಸಂಜೆ 5.00 ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿನಿ ಸಭಾಭವನಕ್ಕೆ ತೆರಳಿದರು. ಅಲ್ಲಿ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಚಲನಚಿತ್ರ ನಟ ಸುದೀಪ್ ಹಾಗೂ ಗಣ್ಯ ಅತಿಥಿಗಳು ಮಂಗಳಸೂತ್ರ ನೀಡಿದರು.

 ನೂತನ ದಂಪತಿಗಳಿಗೆ ಶುಭ ಹಾರೈಸಿದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆಯವರು, ಜಾತಿ-ಮತ, ಸಂಪ್ರದಾಯದ ಎಲ್ಲೆಯನ್ನು ಮೀರಿ 23 ಜೊತೆ ಅಂತರ್ಜಾತಿಯ ವಿವಾಹವಾಗಿರುವುದು ಶ್ಲಾಘನೀಯವಾಗಿದೆ. ಹಲವು ಕಾರಣಗಳಿಂದ ಹೆಚ್ಚು ಪ್ರಾಯವಾದ ಬಳಿಕ ಮದುವೆ ಆಗುವುದು ದೊಡ್ಡ ಸಮಸ್ಯೆ ಆಗಿದೆ. ಪರಸ್ಪರ ಪ್ರೀತಿ-ವಿಶ್ವಾಸ, ನಂಬಿಕೆಯಿಂದ ಸತಿ-ಪತಿ ಹೊಂದಿಕೊಂಡು ನೆಮ್ಮದಿ ಜೀವನ ನಡೆಸಬೇಕು. ವಿಚ್ಛೇದನವೇ ಸಮಸ್ಯೆಗೆ ಪರಿಹಾರವಲ್ಲ ಎಂದು ಕಿವಿಮಾತು ಹೇಳಿದರು. ವಿವಾಹದ ಪಾವಿತ್ರ್ಯತೆ ಮತ್ತು ಜೀವನದ ಗೌರವ ಕಾಪಾಡಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಹೇಮಾವತಿ ವಿ ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಚಲನಚಿತ್ರ ನಟ ಸುದೀಪ್, ಪ್ರಿಯಾ ಸುದೀಪ್ ಮತ್ತು ಬಿರ್ಲಾ ಕಂಪೆನಿಯ ಜಂಟಿ ಅಧ್ಯಕ್ಷ ಮನೋಜ್ ಕುಮಾರ್ ಮೆಹತಾ , ಶಾಸಕ ಕೆ. ವಸಂತ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.