ಮಾಜಿ ಸಚಿವ ಕೆ.ಗಂಗಾಧರ ಗೌಡ ಕಾಂಗ್ರೆಸ್ ಸೇರ್ಪಡೆ.

 ಬೆಳ್ತಂಗಡಿ: ಅಂಬೇಡ್ಕರ್ ಭವನದಲ್ಲಿ ಮೇ.2 ರಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಕೆ.ಗಂಗಾಧರ ಗೌಡ ರವರು ಸಚಿವ ಡಿ.ಕೆ ಶಿವಕುಮಾರ್ ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಕಾಂಗ್ರೆಸ್ ಪಕ್ಷ ದ.ಕ ಜಿಲ್ಲಾ ಅಧ್ಯಕ್ಷ ಕೆ.ಹರೀಶ್ ಕುಮಾರ್, ಬೆಳ್ತಂಗಡಿ ವಿಧಾನ ಸಭಾ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಶ್ರೀನಿವಾಸ ಎನ್.ಕಿಣಿ, ನಗರ ಅಧ್ಯಕ್ಷ ರಾಜಶೇಖರ ಅಜ್ರಿ, ಚಲನಚಿತ್ರ ನಟ ಹಾಗೂ ನಿರ್ದೇಶಕ ಸಾಧುಕೋಕಿಲ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.