ರಾಜ್ಯ ವಿಧಾನ ಸಭಾ ಚುನಾವಣೆಯ ಪ್ರಯುಕ್ತ ಮೇ.12 ರಂದು ಮತದಾನಕ್ಕೆ ಅನುಗುನವಾಗುವಂತೆ ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಹಾಗೂ ಶಾಲಾ ಕಛೇರಿಗಳು ಅನುದಾನಿತ ವಿದ್ಯಾಸಂಸ್ಥೆಗಳು ಸೇರಿ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ,ಇತರೆ ಬ್ಯಾಂಕ್ ಗಳು, ಸರ್ಕಾರಿ ಹಾಗೂ ಕೇಂದ್ರ ಸರ್ಕಾರದ ಕಾರ್ಖಾನೆ, ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ, ಸಂಸ್ಥೆಗಳು ಸಿಬ್ಬಂದಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. ಈ ರಜೆ ತುರ್ತು ಸೇವೆಗೆ ಅನ್ವಯಿಸುವುದಿಲ್ಲವೆಂದು ದುಸ್ಪಷ್ಟಪಡಿಸಲಾಗಿದೆ. ಸರ್ಕಾರಿ ಕಛೇರಿಗಳಲ್ಲಿ ಅಥವಾ ಸರ್ಕಾರಿ ಶಾಲೆಗಳಲ್ಲಿ ಮತಗಟ್ಟೆ ಸ್ಥಾಪಿಸಿದ್ದಲ್ಲಿ ಅಲ್ಲಿನ ನೌಕರರಿಗೆ ಮೇ.11, ಮೇ.12 ಹಾಗೂ ಮತ ಎಣಿಕೆ ದಿನ ರಜೆ ನೀಡುವ ಅಧಿಕಾರವನ್ನು ಚುನಾವಣಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ.