ನೀತಿ ಸಂಹಿತೆ ಉಲ್ಲಂಘನೆ ಆರೋಪ: ಗಂಗಾಧರ ಗೌಡರಿಗೆ ಚುನಾವಣಾಧಿಕಾರಿ ನೋಟೀಸು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ಮೇ.12 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಚಿವ ಗಂಗಾಧರ ಗೌಡ ರವರು ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಮೇಲೆ ಮಾಡಿದ ಆರೋಪಕ್ಕೆ ತಾಲೂಕು ಚುನಾವಣಾಧಿಕಾರಿಗಳು ನೋಟೀಸು ಜಾರಿಗೊಳಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಭಾರಿ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಅವರು ಮೇ.4 ರಂದು ಬೆಳ್ತಂಗಡಿ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗಂಗಾಧರ ಗೌಡ ರವರು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಕೆ.ಪಿ.ಎಸ್.ಸಿ ಹಗರಣದಲ್ಲಿ ಸಿಲುಕಿದ್ದು, ಹಣದೋಚಿದ್ದಾರೆ. ಸೇರಿದಂತೆ ವಿವಿಧ ಆರೋಪಗಳನ್ನು ಮಾಡಿದ್ದರು. ಇದರ ಬಗ್ಗೆ ಹರೀಶ್ ಪೂಂಜ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಬೆಳ್ತಂಗಡಿ ಕ್ಷೇತ್ರದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘಣೆ ಮಾಡಿದ ಗಂಗಾಧರ ಗೌಡರಿಗೆ ನೋಟೀಸು ಜಾರಿ ಮಾಡಿದ್ದು, ಸೂಕ್ತ ಉತ್ತರ ನೀಡುವಂತೆ ತಿಳಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂಪತ್ ಸುವರ್ಣ, ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ, ಸದಾನಂದ ಪೂಜಾರಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.