HomePage_Banner_
HomePage_Banner_
HomePage_Banner_

ಜನರು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿಲ್ಲ ಮತದಾರರ ತೀರ್ಮಾನಕ್ಕೆ ಬದ್ಧ: ಬಂಗೇರ

Advt_NewsUnder_1

ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಧಾನ ಸಭಾ ಚುನಾವಣಾ ಫಲಿತಾಂಶದ ಬಗ್ಗೆ `ಸುದ್ದಿ’ ಅವರನ್ನು ಮಾತನಾಡಿಸಿದಾಗ ಈ ಅಭಿಪ್ರಾಯ ವ್ಯಕ್ತಪಡಿಸಿದ ಅವರು ರಾಜ್ಯದ ಕಾಂಗ್ರೆಸ್ ಸರಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿತ್ತು. ನಾನು ತಾಲೂಕಿನಲ್ಲಿ ಅದೆಷ್ಟೋ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದೇನೆ. ಆದರೆ ಅದಕ್ಕೆ ಯಾವುದಕ್ಕೂ ಕೂಡಾ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಯಿತು, ಅಭಿವೃದ್ಧಿಯ ಬಗ್ಗೆ ಜನರು ಚಿಂತನೆಯನ್ನೇ ಮಾಡಿಲ್ಲ ಎಂದು ತಿಳಿಸಿದರು.
ಈ ಬಾರಿಯ ಚುನಾವಣೆಯಲ್ಲಿ ಇ.ವಿ.ಎಂ ಬಗೆಗೆ ನನಗೆ ಸಂಶಯವಿದೆ. ಆದರೆ ಚುನಾವಣೆಯಲ್ಲಿ ಸೋಲಾದ ನಂತರ ಇದನ್ನೆಲ್ಲಾ ಪ್ರಸ್ತಾಪಿಸುವುದು ಸರಿಯಲ್ಲ ಎಂದು ನಾನು ಭಾವಿಸಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ನನಗೆ ಮತದಾನ ಮಾಡಿ ಸಹಕರಿಸಿದ ತಾಲೂಕಿನ ಎಲ್ಲಾ ಮತದಾರ ಬಂಧುಗಳಿಗೆ, ಪಕ್ಷದ ತಾಲೂಕಿನ ಎಲ್ಲಾ ಹಿರಿಯ-ಕಿರಿಯ ನಾಯಕರುಗಳಿಗೆ, ಅಭಿಮಾನಿ ಬಂಧುಗಳಿಗೆ ಈ ಸಂದರ್ಭದಲ್ಲಿ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.