ಪ್ರತಿಷ್ಠಿತ ಶಾಲಾ ಸೇರ್ಪಡೆಗೆ ಪ.ಜಾತಿ ವಿದ್ಯಾರ್ಥಿಗಳಿಗೆ ಅವಕಾಶ.

Advt_NewsUnder_1
Advt_NewsUnder_1

ಬೆಳ್ತಂಗಡಿ: ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ದಾಖಲಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆ, ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿ, ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಮಡಂತ್ಯಾರು ಸೇರ್ಪಡೆಗೊಳಿಸಬಹುದಾದ ಶಾಲೆಗಳು.
ಗರಿಷ್ಠ ರೂ. 50 ಸಾವಿರ ಶಾಲಾ ಶುಲ್ಕವನ್ನು ಸರಕಾರದ ವತಿಯಿಂದ ಭರಿಸಲಾಗುವುದು ( ಶಾಲೆಯ ಕಡ್ಡಾಯ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರ ಭತ್ಯೆಗಳನ್ನು ಒಳಗೊಂಡಿರುತ್ತದೆ) ವಿದ್ಯಾರ್ಥಿಯ ಬ್ಯಾಂಕ್ ಪಾಸ್‌ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಐ.ಎಫ್.ಸಿ ಕೋಡ್ ಇರಬೇಕು.
ಅರ್ಜಿಗಳು ಮತ್ತು ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಉಪನಿರ್ದೇಶಕರ ಕಚೇರಿ ( ಸಮಾಜ ಕಲ್ಯಾಣ ಇಲಾಖೆ, ಉರ್ವ ಸ್ಟೋರ್‍ಸ್ ಅಶೋಕನಗರ ಮಂಗಳೂರು ಇಲ್ಲಿ ಸಂಪರ್ಕಿಸಬಹುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.