ಚಾರ್ಮಾಡಿ: ಚಾರ್ಮಾಡಿ ಘಾಟಿಯ 2ನೇ ತಿರುವಿನಿಂದ 10ನೇ ತಿರುವಿನವರೆಗೆ ಇಂದು ಬೆಳಿಗ್ಗೆ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಕೆಲ ತಾಸುಗಳ ಕಾಲ ಲಘು ಹಾಗೂ ಘನ ವಾಹನಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಯಿತು. ಹಸನಬ್ಬರವರ ಸಹಕಾರದಲ್ಲಿ ಪೊಲೀಸರಿಂದ ಕಾರ್ಯಾಚರಣೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.